ಗಣೇಶೋತ್ಸವ; ಪೂರ್ವಭಾವಿ ಸಭೆ

ಬೆಳಗಾವಿ,ಸೆ.2: ಗಣೇಶೋತ್ಸವ ಮಂಡಳಿಗಳಿಗೆ ಸುಲಭವಾಗಿ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಪೆÇಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಸ್ಕಾಂ, ಪೆÇಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಆಯಾ ಪೆÇಲೀಸ್ ಠಾಣೆಯ ಏಕಗವಾಕ್ಷಿ ಕೇಂದ್ರದಲ್ಲಿ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಉಪಸ್ಥಿತರಿದ್ದು, ಅಗತ್ಯ ಅನುಮತಿಯನ್ನು ನೀಡಲಿದ್ದಾರೆ ಎಂದು ಹೇಳಿದರು.
ಈ ಕುರಿತು ಏಕಗವಾಕ್ಷಿ ತಂಡಗಳಿಗಾಗಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಮಂಟಪಗಳನ್ನು ನಿರ್ಮಿಸಬೇಕು.
ಸಾರ್ವಜನಿಕರ ಸಂಚಾರಕ್ಕೆ, ಮಹಾನಗರ ಪಾಲಿಕೆಯ ಕಸ ವಿಲೇವಾರಿ ಹಾಗೂ ಅಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆಯಾಗದಂತೆ ಮಂಟಪದ ಅಳತೆಯು ಮಿತಿಯೊಳಗೆ ಇರುವಂತೆ ನಿಗಾವಹಿಸಬೇಕು.
ಗಣೇಶ ಮೂರ್ತಿಗಳ ಆಗಮನ ಹಾಗೂ ವಿಸರ್ಜನೆ ಸಂದರ್ಭದಲ್ಲಿ ರಸ್ತೆಯಲ್ಲಿನ ವಿದ್ಯುತ್ ಹಾಗೂ ವಿವಿಧ ದೂರ ಸಂಪರ್ಕ ಕೆಬಲಗಳನ್ನು ಮೇಲಸ್ಥರಕ್ಕೆ ಎತ್ತರಿಸಲು ಸೂಚಿಸಿದ ಅವರು, ಅರಣ್ಯ ಇಲಾಖೆ ವತಿಯಿಂದ ರೆಂಬೆಗಳನ್ನು ಕತ್ತರಿಸಲು ಕ್ರಮವಹಿಸಬೇಕು.
ಹೆಸ್ಕಾಂ, ಪೆÇೀಲಿಸ, ಪಾಲಿಕೆ, ಅರಣ್ಯ, ಅಗ್ನಿಶಾಮಕ, ಬಿ.ಎಸ್.ಎನ್.ಎಲ್ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಮೆರವಣಿಗೆ ಮಾರ್ಗದಲ್ಲಿ ಜಂಟಿಯಾಗಿ ಸಮೀಕ್ಷೆ ಜರುಗಿಸಿ ನಿಖರವಾದ ವರದಿಯನ್ನು ಒದಗಿಸಲು ಸೂಚಿಸಿದರು.
ಪಾಲಿಕೆ ವತಿಯಿಂದ ಗಣೇಶ ಆಗಮನ ಹಾಗೂ ವಿಸರ್ಜನೆ ಮಾರ್ಗದಲ್ಲಿನ ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಕೂಡಲೆ ಕ್ರಮ ವಹಿಸಿ, ಕತ್ತಲೆ ಹೆಚ್ಚಿರುವ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಕಣ್ಗಾವಳು ಸ್ಥಾವರ ಹಾಗೂ ಸಾರ್ವಜನಿಕರ ಗ್ಯಾಲರಿ ನಿರ್ಮಾಣಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದರು.