ಸದಸ್ಯತ್ವ ಅಭಿಯಾನ ಯಶಸ್ವಿಗೆ ಶ್ರಮಿಸಿ: ಸಂಸದ ಜಿಗಜಿಣಗಿ ಕರೆ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೨:ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಗರ ಮಂಡಲ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ಸಭೆ ನಡೆಯಿತು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಮನೆ ಮನೆಗೆ ತೆರಳಿ ಸದಸ್ಯತ್ವ ಮಾಡುವ ಮೂಲಕ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಮಾತನಾಡಿ, ದೇಶದ ಭವಿಷ್ಯದ ದೃಷ್ಟಿಯಿಂದ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಅವಶ್ಯಕತೆಯಿದೆ. ಹೀಗಾಗಿ ಸದಸ್ಯತ್ವ ಅಭಿಯಾನದಲ್ಲಿ ಅತ್ಯಂತ ಉತ್ಸಾಹದಿಂದ ನಾವೆಲ್ಲರೂ ಭಾಗವಹಿಸಿ, ರಾಜ್ಯದಲ್ಲೇ ವಿಜಯಪುರ ನಗರವನ್ನು ನಂಬರ್ ಒನ್ ಸ್ಥಾನ ಪಡೆಯೋಣ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್.ಎ. ಪಾಟೀಲ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಮಳುಗೌಡ ಬಿರಾದಾರ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಜವಾಹಾರ ಗೋಸಾವಿ, ಮಹೇಶ ಒಡೆಯರ, ಮುಖಂಡರಾದ ಬಸವರಾಜ ಬೈಚಬಾಳ, ಲಕ್ಷ್ಮೀ ಕನ್ನೊಳ್ಳಿ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.