ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಮಂಜುಳಾ ಆಯ್ಕೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಸೆ.02: ದಾವಣಗೆರೆಯ ಎಸ್.ಎಸ್.ಬಡಾವಣೆಯ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಪೆಷೆಲ್ ಒಲಿಂಪಕ್ಸ್ ಭಾರತ್-ಕರ್ನಾಟಕ ಸಂಸ್ಥೆ ಆಯೋಜಿಸಿದ್ದ ರಾಜ್ಯ ವಿಶೇಷಚೇತನರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆ ಗ್ರಾಮದಲ್ಲಿರುವ ಶ್ರೀಲಕ್ಷ್ಮೀ ಭೂವರಹಾನಾಥಸ್ವಾಮಿ ಬುದ್ದಿಮಾಂಧ್ಯ ಮಕ್ಕಳ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮುರುಕನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಮಂಜುಳಾ ಪ್ರಥಮ ಸ್ಥಾನ ಪಡೆದು ಸೆ.05 ರಿಂದ ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಈಕೆಗೆ ಕೋಚ್ ಆಗಿ ಶಿಕ್ಷಕಿ ಪ್ರೀತಿ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಅಧ್ಯಕ್ಷೆ ಸುಷ್ಮಾ ಕಾರ್ಯದರ್ಶಿ ಟಿ.ನಿರಂಜನ್ ತಿಳಿಸಿದ್ದಾರೆ.