ಅಮ್ಮಾಜೇಶ್ವರಿ ನೀರಾವರಿ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಲಕ್ಷ್ಮಣ ಸವದಿ
ಅಥಣಿ : ಸೆ.1:ತಾಲೂಕಿನ ಪೂರ್ವ ಭಾಗದ ಸುಮಾರು 60 ಸಾವಿರ ಎಕರೆ ಭೂಮಿಗೆ ನೀರಾವರಿ ಒದಗಿಸುವ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿ ಪ್ರಾರಂಭವಾಗಿದ್ದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಈ ಯೋಜನೆಯ ಬಗ್ಗೆ ತುಂಬಾ ಮುತುವರ್ಜಿ ವಹಿಸಿದ್ದು ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮೊದಲ ಹಂತದ ಕಾಮಗಾರಿ ಶನಿವಾರ ವೀಕ್ಷಣೆ ಮಾಡಿದರು. ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕಳೆದ ಮಾರ್ಚ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಸುಮಾರು 1500 ಕೋಟಿ ರೂಗಳ ವೆಚ್ಚದ ಈ ಯೋಜನೆಗೆ ಅಡಿಗಲ್ಲು ಸಮಾರಂಭ ನೆರವೇರಿಸಿದ್ದರು.
ಈ ವೇಳೆ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ಸುಮಾರು 1500 ಕೋಟಿ ರೂಗಳ ವೆಚ್ಚದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಈ ಭಾಗದ ರೈತರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಈ ಯೋಜನೆ ಗುಣಮಟ್ಟದ ಜೊತೆಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ.
ನೂತನ ತಂತ್ರಜ್ಞಾನ ಬಳಸಿಕೊಂಡು ಕೆನಾಲ್ ಬದಲಾಗಿ ಪೈಪ್ ಲೈನ್ ಮೂಲಕ ರೈತರ ಭೂಮಿ ಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಹಾಯದಿಂದ ಈ ಯೋಜನೆಗೆ ನಬಾರ್ಡ್ ನಿಂದಲೂ ಹಣಕಾಸಿನ ನೆರವು ಪಡೆಯಲು ಅನುಮತಿ ಪಡೆಯಲಾಗಿದೆ. ಈ ಯೋಜನೆ ಪೂರ್ಣಗೊಂಡರೆ ಬರಗಾಲ ದೂರವಾಗಿ ಈ ಭಾಗದ ರೈತರ ಬದುಕು ಬಂಗಾರವಾಗುವ ಕಾಲ ಸನ್ನಿಹಿತವಾಗಿದೆ ಎಂದರು.
ಈ ವೇಳೆ ನೀರಾವರಿ ಇಲಾಖೆ ಅಧಿಕಾರಿ ಪ್ರವೀಣ್ ಹುಣಸಿಕಟ್ಟಿ, ಹಾಗೂ ತೆಲಸಂಗ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನ್ಯಾಯವಾದಿ ಅಮೋಘ ಖೋಬ್ರಿ. ಮಾಜಿ ತಾಪಂ ಸದಸ್ಯ ಶ್ರೀಶೈಲ ಶಲ್ಲೆಪ್ಪಗೋಳ. ಅಪ್ಪು ಜಮಾದಾರ. ರಾಜು ಕಾರಂಡೆ. ರವಿ ಸಿಂಧೆ. ಬುಡ್ಡು ಜಮಾದಾರ. ಅಪ್ಪು ಬಿಜ್ಜರಗಿ. ಕುಮಾರ ಸಿಂಧೆ. ಮಲ್ಲು ಕುಲ್ಲೋಳ್ಳಿ.
ಸೇರಿದಂತೆ ಹಲವರು ಮುಖಂಡರು. ರೈತರು ಗ್ರಾಮಸ್ಥರು ಉಪಸ್ಥಿತರಿದ್ದರು.