ಚಿದಂಬರೇಶ್ವರ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವ ಮೂರ್ತಿಯ ಅದ್ಧೂರಿ ಮೆರವಣಿಗೆ
ವಿಜಯಪುರ,ಸೆ.1: ಇಲ್ಲಿನ ಚಿದಂಬರೇಶ್ವರ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವ ಮೂರ್ತಿಯೊಂದಿಗೆ ಅದ್ಧೂರಿ ಮೆರವಣಿಗೆ ಜರುಗಿತು. ನಗರದ ವೆಂಕಟೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಯು ಗಣೇಶನಗರ ಮೂಲಕ ಚಿದಂಬರ ದೇವಸ್ಥಾನಕ್ಕೆತಲುಪಿತು.
ಈ ಸಂದರ್ಭದಲ್ಲಿ ಚಿದಂಬರೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಚಿದಂಬರ ಭಜನಾಮಂಡಳಿ ಹಾಗೂ ವಿಜಯಪುರ ಸಮಸ್ತ ಭಜನಾ ಮಂಡಳಿಗಳು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಾಯೋಜಕತ್ವದಲ್ಲಿ ಡೊಳ್ಳು ಕುಣಿತ, ಗೊಂಬೆ ಕುಣಿತ ಮೆರವಣಿಗೆಗೆ ಮೆರಗು ತಂದವು.
ಈ ಸಂಭರ್ದದಲ್ಲಿ ಚಿದಂಬರ ದೇವರ ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.