ಬಿಜೆಪಿ ಸದಸ್ಯತ್ವ ನೋಂದಣಿಗೆ ಚಾಲನೆ
ಕೆ.ಆರ್.ಪುರ,ಅ.೩-ಕೆ.ಆರ್. ಪುರ ಕ್ಷೇತ್ರದಲ್ಲಿ ೫೦ ಸಾವಿರಕ್ಕು ಹೆಚ್ಚು ಬಿಜೆಪಿ ಸದಸ್ಯತ್ವ ನೋಂದಣಿ ಮಾಡಲಾಗಿದೆ ಎಂದು ಕ್ಷೇತ್ರದ ಅಧ್ಯಕ್ಷರಾದ ಮುನೇಗೌಡ ಅವರು ತಿಳಿಸಿದರು.

ಕ್ಷೇತ್ರದ ರಾಮಮೂರ್ತಿನಗರದ ವಿವಿಧೆಡೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ.ಎ. ಬಸವರಾಜ ಅವರ ನೇತೃತ್ವದಲ್ಲಿ ಏರ್ಪಡಿಸಿದ್ದ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.
ಕ್ಷೇತ್ರದಲ್ಲಿ ಹೆಚ್ಚು ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಏಲ್ಲ ವಾರ್ಡಗಳಲ್ಲಿ ಹೆಚ್ಚಿನ ಸದಸ್ಯತ್ವ ಮಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು,ಮುಂದಿನ ದಿನಗಳಲ್ಲಿ ಮತ್ತಷ್ಟು ಸದಸ್ಯತ್ವ ಮಾಡಲಾಗುವುದು ಎಂದು ನುಡಿದರು.
ಪಕ್ಷವನ್ನು ಬೂತ್ ಮಟ್ಟದಿಂದ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮಾಜಿ ಪಾಲಿಕೆ ಸದಸ್ಯರು, ಏಲ್ಲಾ ಮೋರ್ಚಾಗಳು ಹಾಗೂ ಮುಖಂಡರು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಯಂತಿ, ನಾಗರಾಜ್, ವೆಂಕಟರಾಮನ್, ಮತ್ತಿತರರು ಇದ್ದರು.