ಗಾಂಧಿ ಜಾಥಾ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು
ಸಂಜೆವಾಣಿ ವಾರ್ತೆ
ದಾವಣಗೆರೆ,ಅ.೩; ದಾವಣಗೆರೆಯ ಗಾಂಧಿ‌ಭವನದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಾಂಧೀಜಿಯವರ ಪೋಟೊ ಹಾಗೂ ರಾಷ್ಟ್ರ ಧ್ವಜವನ್ನಿಡಿದು ಕಾಂಗ್ರೆಸ್ ಪಕ್ಷದ ಮುಖಂಡರು ಜಾಥಾ ನಡೆಸಿದರು. ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ, ದೂಡ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ., ಕಿಸಾನ್ ಕಾಂಗ್ರೆಸ್ ವಿಭಾಗದ ಪ್ರಧಾನ ಕಾರ್ಯದರ್ಶಿ ಭಾತಿ ಶಿವಕುಮಾರ್, ಪಾಲಿಕೆ ಸದಸ್ಯ ಏ.ನಾಗರಾಜ್,ಮಂಜುನಾಥ್ ಗುಡಿಗುಡಲ ಸೇರಿದಂತೆ ಹಲವರಿದ್ದರು.