ಅಂಜುಮನ್ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ
ವಿಜಯಪುರ, ಸೆ.1:ನಗರದ ಅಂಜುಮನ್ ಕಾನೂನು ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಸ್.ಎಸ್.ನಾಗಠಾಣ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದರು.
ದೈಹಿಕ ನಿರ್ದೇಶಕ ತೌಫೀಕ ಅಹ್ಮದ್ ಕೂಡಗಿ ಅವರು ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ಒತ್ತಿ ಹೇಳಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸಲು ಆನ್‍ಲೈನ್ ರಸಪ್ರಶ್ನೆಯನ್ನು ಆಯೋಜಿಸಲಾಗಿತ್ತು.
ರಸಪ್ರಶ್ನೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.