ಪಠ್ಯೆತರ ಚಟುವಟಿಕೆಗೆ ಒಳಗಾದ ವಿದ್ಯಾರ್ಥಿಗಳುದುಶ್ಚಟಗಳಿಂದ ದೂರ
ಸಂಜೆವಾಣಿ ವಾರ್ತೆ
ಬಳ್ಳಾರಿ, ಸೆ.01: ಪಠ್ಯೆತರ ಚಟುವಟಿಕೆಗಳಿಗೆ ಒಳಗಾಗದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಾರೆ ಎಂದು ಕುಲಸಚಿವರಾದ ರುದ್ರೇಶ್ ಎಸ್. ಎನ್. ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ  ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿಶ್ವವಿದ್ಯಾಲಯದ ಸಹಯೋಗದಲ್ಲಿ 27 ರಿಂದ 31ರ ವರೆಗೆ ಜರುಗಿದ ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ-2024” ಸಮಾರೋಪ ಸಮಾರಂಭವನ್ನು ಎನ್.ಎಸ್.ಎಸ್. ಗೀತೆಯನ್ನು ಹಾಡುವ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅವರು ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಬಿಂಬಿಸಲು ಇಂತಹ ವೇದಿಕೆಗಳು ಪ್ರಮುಖ ಪಾತ್ರವಹಿಸುತ್ತವೆ. ಪಠ್ಯಪುಸ್ತಕದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಭೌತಿಕವಾಗಿಯೂ ಮತ್ತು ಮಾನಸಿಕವಾಗಿಯೂ ಸದೃಢರನ್ನಾಗಿ ಮಾಡುತ್ತವೆ ಎಂದು ಹೇಳಿದರು.
ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿಗಳಾದ ಡಾ. ಕುಮಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವುದೇ ಯುವಜನೋತ್ಸವದ ಉದ್ದೇಶವಾಗಿದೆ ಎಂದರು. ಐದು ದಿನಗಳ ರಾಜ್ಯ ಮಟ್ಟದ ಯುವಜನೋತ್ಸವ ಕುರಿತು ವರದಿ ವಾಚನ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮೋಹನದಾಸ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ರಾಬರ್ಟ್ ಜೋಸ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥರಾದ ಡಾ. ಶಶಿಧರ ಕೆಲ್ಲೂರ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಎನ್‍ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಶಿಬಿರದಲ್ಲಿ ರಾಜ್ಯದ 21 ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ 2024”ರ 10 ವಿವಿಧ ಸ್ಪರ್ಧೆಗಳಲ್ಲಿ ಮೊದಲನೇ ಸ್ಥಾನದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾಲಯವು ಅಲಂಕರಿಸಿದೆ. ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಡೆದುಕೊಂಡಿದೆ.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಫಲಕಗಳನ್ನು ಹಾಗೂ ಪ್ರಮಾಣ ಪತ್ರಗಳನ್ನು ವಿವಿಯ ಕುಲಸಚಿವರು ವಿತರಿಸಿದರು. ವಿವಿಧ ವಿಶ್ವವಿದ್ಯಾಲಯಗಳ ಎನ್‍ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಚೌಡಪ್ಪ ವಿ. ಎ. ಅತಿಥಿಗಳನ್ನು ಸ್ವಾಗತಿಸಿದರು. ಡಾ. ನಾಗರಾಜ್ ದಂಡೋತಿ ನಿರೂಪಿಸಿದರು. ಡಾ. ಭಾಗ್ಯಜ್ಯೋತಿ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ವಿದ್ಯಾರ್ಥಿಗಳ ಅನಿಸಿಕೆ ಸುಜೇಯಕುಮಾರ ಶೆಟ್ಟಿ ಮಂಗಳೂರು ವಿಶ್ವವಿದ್ಯಾಲಯ
‘ವಿವಿಯ ಅಧಿಕಾರಿಗಳು ಅಂತರ ಕಾಯ್ದು ಕೊಳ್ಳುತ್ತಾರೆ, ವಿಶ್ರೀಕೃವಿವಿ ಕುಲಸಚಿವರು ವಿದ್ಯಾರ್ಥಿಗಳ ಜೊತೆಗೆ ವಿದ್ಯಾರ್ಥಿಯಾಗಿ ನಮಗೆ ಸ್ಪೂರ್ತಿಯಾಗಿದ್ದಾರೆ’ ನಿತ್ಯಾ ಎಂ ಸ್ವಾಮಿ ದಯಾನಂದಸಾಗರ ವಿಶ್ವವಿದ್ಯಾಲಯ
‘ಸಾಂಸ್ಕೃತಿ ಕಾರ್ಯಕ್ರಮಗಳು ಪಟ್ಟಣದ ಪ್ರದೇಶಗಳಲ್ಲಿ ಕಡಿಮೆಯಾಗಿದ್ದು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುತ್ತವೆ’
ಅರ್ಪಿತಾ ಬೆಂಗಳೂರು ವಿಶ್ವವಿದ್ಯಾಲಯ ‘ಶಿಬಿರದಲ್ಲಿ ಕಲಿತಿರುವ ಮಾನವಿಯ ಮೌಲ್ಯಗಳು ಒಳ್ಳೆಯ ಅನುಭವವನ್ನು ನೀಡಿವೆ, ಮುಂಬರು ದಿನಗಳಲ್ಲಿ ಈ ವಿಶ್ವವಿದ್ಯಾಲಯವು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಹೆಮ್ಮರವಾಗಿ ವಿಶ್ವವಿದ್ಯಾಲಯ ಬೆಳೆಯಲಿದೆ
ಪೂರ್ಣಚಂದ್ರ  ನಿಟ್ಟೆ ವಿಶ್ವವಿದ್ಯಾಲಯ ವಿವಿಧ ಪ್ರದೇಶಗಳಿಂದ ಬಂದಿರು ವಿದ್ಯಾರ್ಥಿಗಳ ಜೊತೆ ಹೊಂದಿಕೊಂಳ್ಳುವುದು ಹೇಗೆ ಅಂತ ವಿಚಲಿತನಾಗಿದ್ದೆ, ವಿವಿಯ ಎಲ್ಲ ಅಧಿಕಾರಿಗಳು ಶಿಬಿರದಲ್ಲಿ ಸಹಕರಿಸಿ ಶಿಬಿರವನ್ನು ಯಶಸ್ವಿಯಾಗಿಸಿದರು.