ಕೆ.ಬಿ.ಪ್ರಮೋದ್ ಗೆ ಪಿ.ಎಚ್.ಡಿ ಪದವಿ ಪ್ರದಾನ
ಸಂಜೆವಾಣಿ ವಾರ್ತೆ
ಕೆ.ಆರ್.ನಗರ, ಸೆ.01:– ಸಾಲಿಗ್ರಾಮ ತಾಲ್ಲೂಕಿನ ಕುಪ್ಪಹಳ್ಳಿ ಗ್ರಾಮದ ಶಿಕ್ಷಕ ಕೆ.ಬಿ.ಪ್ರಮೋದ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದ ಪಿಎಚ್.ಡಿ ಪದವಿ ದೊರೆತಿದೆ.
ಡಾ.ಅರವಿಂದ ಮಾಲಗತ್ತಿ ಅವರ ಮಾರ್ಗ ದರ್ಶನದಲ್ಲಿ ಕೆ.ಬಿ.ಪ್ರಮೋದ್ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ “ಹೊಸಗನ್ನಡ ಕಾವ್ಯದಲ್ಲಿ ದೇವರ ಗ್ರಹಿಕೆ” ಎಂಬ ಮಹಾಪ್ರಬಂಧವನ್ನು ಕನ್ನಡ ವಿಷಯದಲ್ಲಿ ಪಿ.ಎಚ್.ಡಿ ಪದವಿಗಾಗಿ 2017ರ ಮೈಸೂರು ವಿಶ್ವವಿದ್ಯಾನಿಲಯದ ಪಿ.ಎಚ್.ಡಿ ನಿಯಮಾವಳಡಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ
ಪೆÇ್ರ.ಎನ್.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಕೆ.ಬಿ.ಪ್ರಮೋದ್ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಲಾಗುವುದು.