ಕ್ರೀಡಾ, ಸಾಂಸ್ಕೃತಿಕ, ರೋವರ್ಸ್, ಎನ್‌ಎಸ್‌ಎಸ್ ಘಟಕಗಳ ಉದ್ಘಾಟನೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೩೧; ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಕ್ರೀಡಾ, ಸಾಂಸ್ಕೃತಿಕ, ರೋವರ್ಸ್, ಎನ್‌ಎಸ್‌ಎಸ್ ಘಟಕಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಚಾಲನೆ ನೀಡಲಾಯಿತು.ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕರು ಇಂದು ಉನ್ನತ ಸ್ಥಾನಮಾನದಲ್ಲಿದ್ದಾರೆ. ಅದಕ್ಕೆ ಕಾರಣ ಛಲ-ಗುರಿ. ನೀವು ಕೂಡ ಅವರ ಹಾದಿಯಲ್ಲಿ ಸಾಗಲು ಕಲಿಕೆಯಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.