ಈಜು ಒಂದು ದಿನಕ್ಕೆ ಸೀಮಿತವಾಗಬಾರದು
ಶಿವಮೊಗ್ಗ .ಸೆ.೧; ಈಜು ಒಂದು ದಿನಕ್ಕೆ ಸೀಮಿತವಾಗಬಾರದು ಅದು ದೈನಂದಿನ ಬದುಕಿನ ಅವಿಭಾಜ್ಯ ಕಾರ್ಯವಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರಾದ ಮಂಜುನಾಥ ಎಸ್. ಆರ್.ಹೇಳಿದರು. ಅವರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ  ಕಚೇರಿ, ಶಿವಮೊಗ್ಗ. ಹಾಗೂ  ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ  ಜಿಲ್ಲಾ ಕ್ರೀಡಾ ಸಂಕೀರ್ಣ ದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿ ಯೊಳಗಿನ ಬಾಲಕ ಮತ್ತು ಬಾಲಕಿಯರ  ಜಿಲ್ಲಾ ಮಟ್ಟದ ಈಜು  ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತ್ತಾ, ದೈಹಿಕವಾಗಿ ಮತ್ತು ಮಾನಸಿಕವಾಗಿ, ಆರೋಗ್ಯವಂತರಾಗಲು ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದರು. ಮಕ್ಕಳಿಗೆ ಕೇವಲ ಅಂಕ ಗಳಿಸುವುದು ಮುಖ್ಯವಲ್ಲ, ಓದಿನ ಜೊತೆಗೆ ಮಾನಸಿಕ, ಆರೋಗ್ಯ ಸದೃಢತೆಯನ್ನು ಕಾಪಾಡಿಕೊಳ್ಳುವಂತಹ ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಜವಾಬ್ದಾರಿಯಾಗಿದೆ ಎಂದರು.