ಸರ್ಕಾರಿ ಶಾಲೆ ಉಳಿಸಿ ಬೆಳೆಸೋಣ: ಗೀತಾ ಭರಮಸಾಗರ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಸೆ.೧: “ಸರ್ಕಾರಿ ಶಾಲೆ ಉಳಿಸಿ ಅಭಿಯಾನ”ದಡಿ ಶತಮಾನೋತ್ಸವದಲ್ಲಿರುವ ಚಿತ್ರದುರ್ಗ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಕೆಳಗೋಟೆ ( ಬಾರ್ ಲೈನ್) ಶಾಲೆಯನ್ನು ವಿಶೇಷವಾಗಿ ಅಭಿವೃದ್ಧಿ ಮಾಡಿ ಜಿಲ್ಲೆಯಲ್ಲಿಯೇ ಮಾದರಿ ಶಾಲೆಯಾಗಿ ಮಾಡಲು ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನ  ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣ ತೊಟ್ಟಿರುವುದು ಅತ್ಯಂತ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ಹೇಳಿದರು.