ತಾಯಿ ಮತ್ತು ಮಕ್ಕಳ ಆರೋಗ್ಯದಲ್ಲಿ ಅಭಿವೃದ್ಧಿಯಾದಾಗ ದೇಶ ಅಭಿವೃದ್ಧಿಯಾಗಲು ಸಾಧ್ಯ:ಉಪನಿರ್ದೇಶಕ ರಾಜಕುಮಾರ ರಾಠೋಡ
ಕಲಬುರಗಿ:ಆ.31:ತಾಯಿ ಮತ್ತು ಮಕ್ಕಳ ಆರೋಗ್ಯದಲ್ಲಿ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಈ ಯೋಜನೆ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದ್ದು, ತಾಯಿ ಮಗುವಿನ ಸುಸ್ಥಿರ ಆರೋಗ್ಯದ ಜೊತೆಗೆ ಪರಿಸರ ಸಂರಕ್ಷಣೆಯ ಹೊಣೆಯೂ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಕುಮಾರ ರಾಠೋಡ ಹೇಳಿದರು.
ಶನಿವಾರದಂದು ಕಲಬುರಗಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ 2024-25 ನಿಮತ್ಯ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಅಭಿಯಾನ” ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗಿಡ ನೆಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದರು.
ತಾಯಂದಿರು ಮತ್ತು ಮಕ್ಕಳಲ್ಲಿ ರಕ್ತಹೀನತೆ ಕಡಿಮೆಗೊಳಿಸುವುದು, ಮಕ್ಕಳ ಮತ್ತು ತಾಯಂದಿರ ಪೌಷ್ಟಿಕ ಮಟ್ಟವನ್ನು ಸುಧಾರಿಸುವುದು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಸೆಪ್ಟೆಂಬರ್ ತಿಂಗಳಾದ್ಯಂತ ದೇಶದಾದ್ಯಂತ ಎಲ್ಲ ಅಂಗನವಾಢಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಭೀಮರಾವ ಕಣ್ಣೂರ, ಮಹಾನಗರ ಪಾಲಿಕೆ ಸದಸ್ಯರಾದ ಕೃಷ್ಣನಾಯಕ, ಸುವರ್ಣ ನಗರ ಅಂಗನವಾಡಿ ಕಾರ್ಯಕರ್ತೆಯಾದ ನಾಗಮ್ಮ, ಮಕ್ಕಳ ತಾಯಂದಿರು, ಸ್ತ್ರೀ ಶಕ್ತಿ ಸಂಘದ ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಅಶ್ವಿನಿ ಭದ್ರಶೆಟ್ಟಿ ಹಿರಿಯ ಮೇಲ್ವಿಚಾರಕಿಯರು ಹಾಗೂ ವಂದನಾರ್ಪಣೆಯನ್ನು ಶ್ರೀಮತಿ ಗೋದಾವರಿ ಯಾದವ ಮೇಲ್ವಿಚಾರಕಿಯರು ನಿರ್ವಹಿಸಿದರು.