ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಅಭಿವೃದ್ದಿಗೆ ಸಮರ್ಪಕ ಕಾರ್ಯಕ್ರಮ ಅನುಷ್ಠಾನಗೊಳಿಸಿ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ,ಆ.31: ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಲು ಸಮಪರ್ಕವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.
ಶುಕ್ರವಾರ ಸಂಜೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈ ಜನಾಂಗದ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಅವರಿಗೆ ದೊರಕಿಸಬೇಕಾದ ಸವಲತ್ತುಗಳನ್ನು ತಲುಪಿಸಲು ಕ್ರಮ ವಹಿಸಬೇಕು. ಅಲೆಮಾರಿ-ಅರೆ ಅಲೆಮಾರಿ ಮಕ್ಕಳಿಗೆÀ ವಿದ್ಯಾರ್ಥಿ ವೇತನ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಲ್ಲ ಶಾಲೆಗಳಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಮಾಹಿತಿಯನ್ನು ಕ್ರೂಢೀಕರಿಸಿ ವರದಿ ಸಲ್ಲಿಸುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ಮಕ್ಕಳು ವಿದ್ಯಾರ್ಥಿ ವೇತನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಶಾಲೆ-ಅಂಗನವಾಡಿಗಳಲ್ಲಿನ ಅಲೆಮಾರಿ ಜನಾಂಗದವರ ಮಕ್ಕಳ ಮಾಹಿತಿ ಪಡೆದು, ಪ್ರಾಥಮಿಕ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಈ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಣಕ್ಕೆ ಆದ್ಯತೆ ನೀಡಿ, ಶಿಕ್ಷಣ ಪ್ರಾಮುಖ್ಯತೆ ಕುರಿತು ಈ ಜನಾಂಗದವರಲ್ಲಿ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.
ಅಲೆಮಾರಿ-ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ, ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಒಳಗೊಂಡಂತೆ ಜನಾಂಗದ ಆರ್ಥಿಕ ಅಭಿವೃದ್ದಿಗಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು, ವಸತಿ ಸೌಲಭ್ಯ ಕಲ್ಪಿಸುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಜನಾಂಗದ ಅಭಿವೃದ್ದಿಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಕ್ಕೆ ದೊರೆಯುವ ಸೌಲಭ್ಯ-ಸವಲತ್ತುಗಳನ್ನು ದೊರಕಿಸಿ ಅವರ ಆರ್ಥಿಕ ಸ್ವಾವಲಂಬನೆಗೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಇರುವ ಸೌಲಭ್ಯ-ಸವಲತ್ತುಗಳ ಕುರಿತು ಸೂಕ್ತ ಅರಿವು ಮೂಡಿಸುವಂತೆ ಸೂಚಿಸಲಾಯಿತು.
ಸಾಂಸ್ಕøತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕಲಾವಿದರನ್ನು ಗುರುತಿಸಿ ಅವಕಾಶ ನೀಡುವ ಮೂಲಕ ಈ ಜನಾಂಗದ ಕಲಾವಿದರಿಗೆ ಪ್ರೋತ್ಸಾಹ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಹಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಯೋಜನಾಧಿಕಾರಿ ಸಿ.ಬಿ. ದೇವರಮನಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಈರಣ್ಣ ಆಶಾಪುರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾ ಅಧಿಕಾರಿ ಸಾವಿತ್ರಿ ಗುಗ್ಗರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ನಾಮನಿರ್ದೇಶಿತ ಸದಸ್ಯರಾದ ಗುರಪ್ಪ ಕನ್ನೂರ, ವೆಂಕಟೇಶ ಭೈರಾಮಡಗಿ ಹಾಗೂ ಯಲ್ಲಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.