ರೋಟರಿ ಸಂಸ್ಥೆಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಅಥಣಿ :ಆ.31: ಸಾಧನೆಗೆ ಬಡತನ ಮತ್ತು ಅಂಗವಿಕಲತೆ ಅಡ್ಡಿಯಲ್ಲ, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ನಿರ್ದಿಷ್ಟವಾದ ಗುರಿಯನ್ನು ಇಟ್ಟುಕೊಂಡು ಸತತ ಪ್ರಯತ್ನ ಮಾಡಬೇಕು. ಸಾಧಿಸುವ ಛಲವಿದ್ದರೆ ಸಾಧನೆಯ ಮಾರ್ಗ ಸುಲಭವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.
ಅವರು ಅಥಣಿ ಪಟ್ಟಣದ ಬಣಜವಾಡ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅಥಣಿ ರೋಟರಿ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ದೇಶದ ಪ್ರಗತಿ, ವಿಜ್ಞಾನ ಮತ್ತು ತಂತ್ರಜ್ಞಾನಗಳ ಆವಿಷ್ಕಾರದಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತದೆ. ಅಂದು ಅಮೆರಿಕವನ್ನು ಜಗತ್ತಿನ ಹಿರಿಯಣ್ಣ ಎಂದು ಕರೆಯುತ್ತಿದ್ದೆವು. ಇಂದು ನಮ್ಮ ದೇಶದಲ್ಲಿಯೂ ಕೂಡ ಸಾಕಷ್ಟು ಪ್ರಗತಿ ಕಂಡಿದ್ದೇವೆ, ಸುಧಾರಿತ ಶಿಕ್ಷಣದೊಂದಿಗೆ ಸದೃಢ ಮತ್ತು ಅಭಿವೃದ್ಧಿ ಭಾರತ ವಿಶ್ವಗುರು ಸ್ಥಾನದಲ್ಲಿ ಪ್ರಗತಿ ಸಾಧಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ
ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸುವುದು ಮಾತ್ರ ಸಾಧನೆ ಅಲ್ಲ, ದೇಶಕ್ಕೆ ಇಲ್ಲವೇ ಈ ನಾಡಿಗೆ ನಾನು ಏನಾದರೂ ವಿಶೇಷ ಕೊಡುಗೆ ನೀಡಬೇಕು ಎಂಬ ಕನಸು ವಿದ್ಯಾರ್ಥಿಗಳಲ್ಲಿ ಇರಬೇಕು. ಅನೇಕ ಸಾಧಕರ ಮತ್ತು ಮಹಾತ್ಮರ ಜೀವನ ಚರಿತ್ರೆಗಳನ್ನು ಓದಿ ತಿಳಿಯಬೇಕು. ಸಾಧನೆ ಸುಲಭವಾಗಿ ದೊರಕುವುದಿಲ್ಲ. ಕೆಲವೊಮ್ಮೆ ಹಿನ್ನಡೆ ಆಗಬಹುದು, ಅದಕ್ಕೆ ಹೆದರಿ ಗುರಿ ಸಾಧನೆಯನ್ನು ಬಿಡಬಾರದು. ಅಬ್ರಾಹಿಂ ಲಿಂಕನ್ ರಂತೆ ಸತತ ಪ್ರಯತ್ನ ಮಾಡುವ ಮೂಲಕ ಸಾಧನೆಯ ಗುರಿ ಮುಟ್ಟಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆಯ ಅಧ್ಯಕ್ಷ ಅರುಣ ಸೌದಾಗರ ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೊಬೈಲ್ ಎಂಬ ಮಾಯಾಜಾಲದಲ್ಲಿ ಸಿಲುಕಿ ನಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು
ಭವಿಷ್ಯದ ಭಾರತದ ಪ್ರಜೆಗಳಾದ ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣ ಪಡೆದುಕೊಳ್ಳುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು, ಭಾರತೀಯ ಸಂಸ್ಕøತಿ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಗಬೇಕಾದ ಅಗತ್ಯವಿದೆ ಎಂದರು.
ಈ ವೇಳೆ ಸನ್ 2023- 24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬಣಜವಾದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ಬಣಜವಾಡ, ರೋಟರಿ ಸಂಸ್ಥೆಯ ಕಾರ್ಯದರ್ಶಿ ಸಚಿನ್ ದೇಸಾಯಿ, ಖಜಾಂಚಿ ಶೇಖರ ಕೋಲಾರ, ಬಣಜವಾದ ಶಿಕ್ಷಣ ಸಂಸ್ಥೆಯ ಕಾರ್ಯಧ್ಯಕ್ಷ ಅನಿತಾ ಬಣಜವಾಡ, ಅನಿಲ ದೇಶಪಾಂಡೆ, ಬಾಲಚಂದ್ರ ಬುಕೀಟಗಾರ, ಮೇಘರಾಜ್ ಪರಮಾರ, ಶ್ರೀಕಾಂತ್ ಅಥಣಿ, ಅಣ್ಣಾಸಾಬ ತೆಲಸoಗ, ಸಂತೋಷ ಬೊಮ್ಮಣ್ಣವರ, ಡಿ ಡಿ ಮೇಕನಮರಡಿ, ಎನ್. ಜೆ. ಜಿಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಅರುಣ ಸೌದಾಗರ ಸ್ವಾಗತಿಸಿದರು. ಶ್ರೀಕಾಂತ ಅಥಣಿ ನಿರೂಪಿಸಿದರು. ಸಚಿನ ದೇಸಾಯಿ ವಂದಿಸಿದರು.
ಭವಿಷ್ಯ ಭಾರತದ ಪ್ರಜೆಗಳಾಗಿರುವ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಶೈಕ್ಷಣಿಕ ಸುಧಾರಣೆಯಲ್ಲಿ ರೋಟರಿ ಸಂಸ್ಥೆಯು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಾಲೆಗಳಿಗೆ ಶೌಚಾಲಯ, ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಬೋರ್ಡ್ ಗಳ ವಿತರಣೆ, ಶಾಲಾ ಆವರಣದಲ್ಲಿ ಪರಿಸರ ದಿನಾಚರಣೆ, ಬಡ ಮಕ್ಕಳಿಗೆ ಶಾಲಾ ಪರಿಕರ ಮತ್ತು ಸೈಕಲ್ ವಿತರಣೆ ಇಂತಹ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ರೋಟರಿ ಸಂಸ್ಥೆಯಿಂದ ಪ್ರತಿ ವರ್ಷ ಮಾಡಲಾಗುತ್ತಿದೆ
ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ