ಅನಂತನಳ್ಳಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ
ಸಂಜೆವಾಣಿ ವಾರ್ತೆ
 ಹರಪನಹಳ್ಳಿ, ಅ,31-ಇತ್ತೀಚಿಗೆ ಮುಕ್ತಾಯವಾದ ಹರಪನಹಳ್ಳಿ ಪಶ್ಚಿಮ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯ ಅನಂತನಹಳ್ಳಿ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಬಾಲಕರ ಶಟಲ್  ಬ್ಯಾಟ್ಮಿಟನ್ ಮತ್ತು ಬಾಲಕಿಯರ ಶಟಲ್ ಬ್ಯಾಟ್ಮಿಟನ್ ನಲ್ಲಿ ಪ್ರಥಮ ಸ್ಥಾನ, ಬಾಲಕರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ., ಬಾಲಕರ ಕಬಡ್ಡಿ ದ್ವಿತೀಯ ಸ್ಥಾನ, ಬಾಲಕಿಯರ ತ್ರೋಬಾಲ್ ದ್ವಿತೀಯ ಸ್ಥಾನ.
ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಗಾಯತ್ರಿ ಡಿ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ನಾಗವೇಣಿ 600 ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಎನ್ ಮಹೇಂದ್ರ ಗುಂಡು ಎಸೆತ ಮತ್ತು ಚಕ್ರ ಶತಕದಲ್ಲಿ ಪ್ರಥಮ ಸ್ಥಾನ ದೀಪಶ್ರೀ, ಹೇಮಾಶ್ರೀ, ಕಲ್ಪನಾ, ರಕ್ಷಿತ ಚೆಸ್ ನಲ್ಲಿ ಪ್ರಥಮ ಸ್ಥಾನ, ಹನುಮಂತಪ್ಪ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಥಮೇಶ್ ಮತ್ತು ಕರಣ್ ಕುಮಾರ್ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ತಂದುಕೊಟ್ಟ ಎಲ್ಲಾ ಕ್ರೀಡಾಪಟುಗಳಿಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾ ಮುಖ್ಯ ಗುರುಗಳು ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.