ಜೆಡಿಎಸ್ ಕಾರ್ಯಕರ್ತರ ಪಕ್ಷ: ನಿಖಿಲ್
ತುಮಕೂರು, ಆ. ೩೧- ರಾಜ್ಯದಲ್ಲಿ ನಾಯಕರ ಆಧಾರಿತ (ಲೀಡರ್ ಬೇಸ್) ಜೆಡಿಎಸ್ ಪಕ್ಷವನ್ನು ಕಾರ್ಯಕರ್ತರ ಆಧಾರಿತ (ಕೇಡರ್ ಬೇಸ್?) ಪಕ್ಷವನ್ನಾಗಿ ಪರಿವರ್ತಿಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದ ಕೊಲ್ಹಾಪುರದಮ್ಮ ಸಮುದಾಯ ಭವನದಲ್ಲಿ ಜೆಡಿಎಸ್? ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನ ಮತ್ತು ಬೂತ್? ಸಮಿತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷವನ್ನು ಬೇರು ಮಟ್ಟದಿಂದ ಕಟ್ಟುವ ನಿಟ್ಟಿನಲ್ಲಿ ಇದೊಂದು ಮಹತ್ವದ ನಿರ್ಧಾರವಾಗಿದೆ. ಪಕ್ಷಕ್ಕೆ ಕಾರ್ಯಕರ್ತರೇ ಎಲ್ಲಾ ಎಂದರು.
೧೯೯೩ರಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಎಚ್.ಡಿ.ದೇವೇಗೌಡರ ಕನಸನ್ನು ಈಗ ಕೇಂದ್ರ ಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ನನಸು ಮಾಡಿದ್ದಾರೆ. ಲೀಡರ್ ಬೇಸ್ ಪಾರ್ಟಿಯನ್ನು ಕೇಡರ್? ಬೇಸ್? ಪಾರ್ಟಿಯನ್ನಾಗಿ ಮಾಡಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ವಿವಿಧ ಘಟಕಗಳಲ್ಲಿ ಸಕ್ರಿಯವಾಗಿ ದುಡಿಯುವ ಕಾರ್ಯಕರ್ತರನ್ನು ಪಕ್ಷದೊಳಗೆ ಗುರುತಿಸಿ, ಅವಕಾಶ ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಸದಸ್ಯತ್ವ ನೋಂದಣಿ ಮತ್ತು ಬೂತ್ ಕಮಿಟಿಗಳ ನೇಮಕದಲ್ಲಿ ತೊಡಗಿ, ಪಕ್ಷವನ್ನು ಬಲಪಡಿಸುವಂತೆ ಮನವಿ ಮಾಡಿದರು.
ಸಂಸದರಾದ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದ ನಂತರ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು, ಉತ್ಸಾಹ ಕಾಣುತ್ತಿದೆ. ಇದೇ ಹುಮ್ಮಸ್ಸು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ತೋರಿಸಿದರೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಲ್ಲಿ ಅನುಮಾನವಿಲ್ಲ. ಬಿಜೆಪಿ-ಜೆಡಿಎಸ್? ಚುನಾವಣಾ ಹೊಂದಾಣಿಕೆಯು ಉಭಯ ಪಕ್ಷಗಳ ಮುಖಂಡರು ನಿರ್ಧಾರವಾಗಿರಲಿದೆ. ಪಕ್ಷ ಸಂಘಟನೆ ನಮ್ಮ ಪಕ್ಷದ ಅಂತರಿಕ ವಿಚಾರವಾಗಿದೆ. ಈಗಾಗಲೇ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಹ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಹಾಗೆಯೇ ಜೆಡಿಎಸ್? ಕೂಡ ಸಂಘಟನೆಗೆ ಮುನ್ನುಡಿ ಬರೆದಿದ್ದು, ಇಂದಿನಿಂದಲೇ ಪಕ್ಷದ ಕಾರ್ಯಕರ್ತರು ಕೆಲಸ ಆರಂಭಿಸುವಂತೆ ಅವರು ಕರೆ ನೀಡಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶಬಾಬು ಮಾತನಾಡಿ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ನಿರ್ದೇಶನದಂತೆ ಜೆಡಿಎಸ್ ಸದಸ್ಯತ್ವ ನೋಂದಣಿ ಮತ್ತು ಬೂತ್? ಸಮಿತಿಗಳ ಸದಸ್ಯರ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಹಿರಿಯರ ಜತೆಗೆ ಸೇರಿ ಯುವ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕಿದೆ. ಎಲ್ಲಾ ಜಾತಿ, ಜನಾಂಗಗಳನ್ನು ಒಳಗೊಂಡಂತೆ ಒಂದು ಬೂತ್‌ಗೆ ೨೫ ಜನ ಸದಸ್ಯರನ್ನು ನೇಮಿಸಿ, ಅವರ ಪಟ್ಟಿಯನ್ನು ಮುಂದಿನ ಎಂಟು ವಾರಗಳಲ್ಲಿ ಪಕ್ಷದ ಕಚೇರಿಗೆ ತಲುಪಿಸುವ ಜವಾಬ್ದಾರಿ ಆಯಾಯ ಜಿಲ್ಲಾಧ್ಯಕ್ಷರೊಂದಿಗೆ ಹಾಲಿ ಮತ್ತು ಮಾಜಿ ಶಾಸಕರದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ವಿಧಾನಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸಚಿವ ಡಿ.ನಾಗರಾಜಯ್ಯ ಮಾಜಿ ಶಾಸಕರಾದ ಎಂ.ವಿ.ವೀರಭದ್ರಯ್ಯ, ಪಿ.ಆರ್.ಸುಧಾಕರಲಾಲ್, ಕೆ.ಎಂ.ತಿಮ್ಮರಾಯಪ್ಪ, ಎಚ್.ನಿಂಗಪ್ಪ, ಮುಖಂಡರಾದ ಕೆ.ಟಿ.ಶಾಂತಕುಮಾರ್, ನಾಗರಾಜು, ಉಗ್ರೇಶ್, ಎಸ್.ಆರ್. ಗೌಡ, ಜಿಲ್ಲಾಧ್ಯಕ್ಷ ಆರ್.ಸಿ. ಆಂಜಿನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಕುಂಭಯ್ಯ, ವಿಜಯಗೌಡ, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.