ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಕೆ.ಆರ್.ಪುರ,ಆ.೩೧-ಪ್ರಪಂಚದಲ್ಲೆ ಅತಿಹೆಚ್ಚು ಸದಸ್ಯತ್ವ ಹೊಂದಿರುವ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನ ಮತ್ತೊಮ್ಮೆ ಪಕ್ಷದ ಕಾರ್ಯಕರ್ತರು ಈ ಬಾರಿಯೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡುವ ಮೂಲಕ ವಿಶ್ವ ದಾಖಲೆ ಮಾಡುವಂತೆ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಪ್ರಭಾರಿ ಕಿರಣ್ ಬಾಬು ಅವರು ತಿಳಿಸಿದರು.
ಕೆಆರ್ ಪುರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸದಸ್ಯತ್ವ ಅಭಿಯಾನ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದ್ದು,ಕಳೆದಬಾರಿಯಂತೆ ಈ ಬಾರಿಯೂ ರಾಜ್ಯದಲ್ಲಿ ಒಂದು ಕೋಟಿ ಇಪತ್ತು ಲಕ್ಷಕ್ಕೂ ಹೆಚ್ಚು ಸದಸ್ಯತ್ವ ಪಡೆಯುವಂತೆ ಮನವಿ ಮಾಡಿದರು.
ಒಂದು ಬೂತ್ ನಲ್ಲಿ ಗೆ ೩೦೦ ಮಂದಿಗೂ ಹೆಚ್ಚು ಸದಸ್ಯತ್ವ ಮಾಡಬೇಕು,ಕೆಆರ್ ಪುರ ಕ್ಷೇತ್ರ ರಾಜ್ಯದಲ್ಲೇ ನಂ.೧ ಸ್ಥಾನದಲ್ಲಿ ಸದಸ್ಯತ್ವ ಆಗಬೇಕು ಈ ರೀತಿಯಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.
ಕ್ಷೇತ್ರಾಧ್ಯಕ್ಷ ಮುನೇಗೌಡ ಅವರು ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.೨ ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದು ಇದು ಅಕ್ಟೋಬರ್ ವರೆಗೆ ನಡೆಯಲಿದೆ . ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಗೀತಾ ವಿವೇಕಾನಂದಬಾಬು,ಕ್ಷೇತ್ರದ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷ ಗಣೇಶ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ಮಾರ್ಕೆಟ್ ರಮೇಶ್, ಶ್ರೀರಾಮುಲು, ಕಾರ್ಯದರ್ಶಿಗಳಾದ ಕೃಷ್ಣಪ್ಪ, ರಾಮಲಕ್ಷ್ಮಣ್, ಮುಖಂಡರಾದ ಸಂಪತ್, ಶಾಂತಾಕೃಷ್ಣಮೂರ್ತಿ, ಶಿವಪ್ಪ, ಪಟಾಕಿ ರವಿ ಇದ್ದರು.