ಹೊಳಲಿಗೆ ಕೆ.ಜೆ.ಜಾರ್ಜ್ ಭೇಟಿ
ಕೋಲಾರ,ಆ,೩೧- ತಾಲೂಕಿನ ಹೊಳಲಿ ಬಳಿ ಕೊಚಿಮುಲ್‌ಗೆ ಸೇರಿದ ೫೦ ಎಕರೆ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ೧೨ ಮೆ.ವ್ಯಾ ಸೋಲಾರ್ ವಿದ್ಯುತ್ ಸ್ಥಾವರವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಮುಖ್ಯ ಮಂತ್ರಿ ರಾಜಕೀಯ ಕಾರ್ಯದರ್ಶಿ ನಸ್ಸೀರ್ ಆಹಮದ್, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಮಾಲೂರು ಶಾಸಕ ಹಾಗೂ ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಇತರೆ ಮುಖಂಡರು ಹಾಗೂ ಇಂಧನ ಇಲಾಖೆ ಅಧಿಕಾರಿಗಳು ಇದ್ದರು,