ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ ಕಾರ್ಯ
ಸಂಜೆವಾಣಿ ವಾರ್ತೆ
ಹನೂರು: ಆ.31 :– ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 30 ದಿನಗಳಲ್ಲಿ ಸುಮಾರು 1ಕೋಟಿ, 76 ಲಕ್ಷ, 29 ಸಾವಿರ ರೂ. ನಗದು ಹಣ ಸಂಗ್ರಹವಾಗಿದೆ.
ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಗುರುವಾರ ಬೆಳಿಗ್ಗೆ 6.30 ಗಂಟೆಯಿಂದ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ರವರ ದಿವ್ಯಸಾನಿದ್ಯದಲ್ಲಿ, ಪ್ರಾಧಿಕಾರ ಕಾರ್ಯದರ್ಶಿ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿನ ಕುಂಡಿಗಳಲ್ಲಿ ಕಳೆದ ದಿನಾಂಕ 30/7/ 2024 ರಿಂದ 28 /8 /2024 ವರೆಗೆ 30 ದಿನಗಳಲ್ಲಿ ಒಟ್ಟು ಮೊತ್ತ ರೂ.1,76,29,849.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 45 ಗ್ರಾಂ, ಬೆಳ್ಳಿ 1 ಕೆಜಿ 300 ಗ್ರಾಂ. ಹುಂಡಿಯಲ್ಲಿ ದೊರೆತಿದೆ. ಹಾಗೂ ವಿದೇಶಿ ನೋಟುಗಳು 10, ಚಲಾವಣೆಯಾದ 2000 ರೂ. ಮುಖಬೆಲೆಯ 11 ನೋಟುಗಳು. 22 ಸಾವಿರ ರೂ. ಹುಂಡಿಯಲ್ಲಿ ದೊರೆತಿದೆ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಭಾರತಿ.ಡಿ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.