ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಅರಿವು ಮೂಡಿಸಲು ವಿಶೇಷವಾಗಿ ಮೀಷನ್ ಸುರಕ್ಷಾ ಅಭಿಯಾನ: ಡಿ.ಸಿ.
ಕಲಬುರಗಿ:ಆ.30: ಇಂದಿನ ಪ್ರಚಲಿತ ದಿನಮಾನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಾಗಿ ಮಕ್ಕಳಲ್ಲಿ ಅರಿವು ಮೂಡಿಸಲು ವಿಶೇಷವಾಗಿ ಮೀಷನ್ ಸುರಕ್ಷಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ಬಿ ಪೌಜಿಯಾ ತರನ್ನುಮ ಅವರು ಹೇಳಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಎಷ್ಟು ಜನರಿಗೆ ತರಬೇತಿ ನೀಡಲಾಗಿದೆ 3,01,898 ಶಾಲಾ ಮಕ್ಕಳಿಗೆ ಹಾಗೂ 1,21,847 ಅಂಗನವಾಡಿ ಮಕ್ಕಳಿಗೆ/ತಾಯಂದಿರಿಗೆ/ಕಿಶೋರಿಯರಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಅವರುತಿಳಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ತಡೆಗಟ್ಟಲು ಹಾಗೂ ಮಕ್ಕಳಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಮಿಷನ್ ಸುರಕ್ಷಾ ಎಂಬ ಶೀರ್ಷಿಕೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಂಜುಳಾ ಪಾಟೀಲ ಸಭೆಯಲ್ಲಿ ತಿಳಿಸಿದ್ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀನಿಧಿ ಪೊಲೀಸ್ ಇಲಾಖೆ ಕಲಬುರಗಿ ಇವರು ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಪ್ರಕರಣಗಳನ್ನು ದಾಖಲಿಸಲು ಅಧಿಕಾರಿಗಳೊಂದಿಗೆ ಸಹಕರಿಸುವುದಾಗಿ ತಿಳಿಸಿದರು. ಹಾಗೂ ಮಕ್ಕಳ ಸ್ನೇಹಿ ಕಾರ್ನರ್ ನ್ನು ಎರಡು ಪೊಲೀಸ್ ಠಾಣೆಯಲ್ಲಿ ಅಳವಡಿಸಿರುವುದಗಿ ತಿಳಿಸಿದರು. ಹಾಗೂ ಪ್ರತಿವಾರ ಎಲ್ಲಾ ಪೊಲೀಸ್ ಠಾಣೆಯಲ್ಲಿ ತೆರೆದ ಕಾರ್ಯಕ್ರಮಗಳನ್ನು ನಡೆಸಿರುವ ಬಗ್ಗೆ ಸಭೆಯಲ್ಲಿ ತಿಳಿಸಿದರು.