ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ವಿಜಯಪುರ,ಆ.30:ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ಎನ್.ಎಸ್.ಎಸ್ ಕೋಶ, ವಿದ್ಯಾರ್ಥಿಗಳ ಕ್ಷೇಮಪಾಲನಾ ನಿರ್ದೇಶನಾಲಯ, ಆರೋಗ್ಯ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.
ಸಮಾಜ ವಿಜ್ಞಾನ ನಿಕಾಯದ ಡೀನ್ ಹಾಗೂ ಮಹಿಳಾ ವಿವಿಯ ವಿದ್ಯಾರ್ಥಿಗಳ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಶಾಂತಾದೇವಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಪ್ರಸ್ತುತ ಬದಲಾಗುತ್ತಿರುವ ವಾತಾವರಣದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳವುದು ಅತ್ಯಗತ್ಯವಾಗಿದೆ ಎಂದು ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ, ಅಶೋಕಕುಮಾರ ಸುರಪುರ ಹೇಳಿದರು.
ಇದೇ ಸಂದರ್ಭದಲ್ಲಿ ಎಲ್ಲ ಗಣ್ಯರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಯ ವಿದ್ಯಾರ್ಥಿನಿಯರು, ಸಂಶೋಧನಾ ವಿದ್ಯಾರ್ಥಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದ ಪ್ರಯೋಜನೆಯನ್ನು ಪಡೆದುಕೊಂಡರು. ಶಿಬಿರದಲ್ಲಿ ಬಿಪಿ, ಶುಗರ್, ರಕ್ತ ತಪಾಸಣೆ ಸಹ ಮಾಡಲಾಯಿತು. ಶಿಬಿರದಲ್ಲಿ ಜಿಲ್ಲಾ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ನಿರಂಜನ, ಟಿ, ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ ಹೂವಣ್ಣ ಮತ್ತಿತರರು ಉಪಸ್ಥಿತರಿದ್ದರು.