ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಸದೃಢಕ್ಕೆ ಸಹಾಯಕಾರಿ: ಡಿಎಸ್ಪಿ ಯಲಿಗಾರ
ವಿಜಯಪುರ,ಆ.30: ಕ್ರೀಡೆಗಳು ನಮ್ಮನ್ನು ದೈಹಿಕ ಮತ್ತು ಮನಸಿಕವಾಗಿ ಸಬಲರನ್ನಾಗಿ ಮಾಡುತ್ತವೆ. ಎಲ್ಲರೂ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿಜಯಪುರ ನಗರ ಡಿ.ವೈ.ಎಸ್ಪಿ ಬಸವರಾಜ ಯಲಿಗಾರ ಹೇಳಿದ್ದಾರೆ.
ಗುರುವಾರ ಬೆಳಿಗ್ಗೆ ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ “ಇತ್ತೀಚೆಗೆ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ವಿರೋಧಿಸಿ, ಸಾಮೂಹಿಕ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಲಾ ಮಟ್ಟದÀಲ್ಲಿ ಕ್ರೀಡೆಗಳ ಆಯೋಜನೆ ಅಗತ್ಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಈಗಿನಿಂದಲೆ ಹೆಚ್ಚೆಚ್ಚು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಾಣಾಧಿಕಾರಿ ಪ್ರಮೋದಿನಿ ಬೊಳಲಮಟ್ಟಿ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಇಂಥ ಜಾಗೃತಿ ಓಟ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಬಿ.ಎಲ್.ಡಿ.ಇ. ಸಂಸ್ಥೆಯ ಹೊಸ ಆವರಣದ ಮುಖ್ಯದ್ವಾರದಿಂದ ಪ್ರಾರಂಭವಾದ ಮಕ್ಕಳ ಓಟ ಸುಮಾರು ಮೂರು ಕಿ. ಮೀ. ವರೆಗೆ ನಡೆಯಿತು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಕ್ರೀಡಾ ನಿರ್ದೇಶಕÀ ಪೆÇ್ರ. ಎಸ್. ಎಸ್. ಕೋರಿ, ಸಹಾಯಕ ಕ್ರೀಡಾ ನಿರ್ದೇಶಕ ಕೈಲಾಶ ಹಿರೇಮಠ ಉಪಸ್ಥಿತರಿದ್ದರು.
ನಂತರ ನಡೆದ ಬಹುಮಾನ ವಿತರಣೆ ಸಮಾರಂಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ವೈ.ಎಂ. ಜಯರಾಜ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಿ.ಆರ್.ಸಿ ಭೀಮನಗೌಡ ಬಿರಾದಾರ, ಶಾಲೆಯ ಪ್ರಾಚಾರ್ಯ ಶೈಜೂ ನಾಯರ, ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ ಉಪಸ್ಥಿತರಿದ್ದರು.