ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಆಗ್ರಹಿಸಿ ಡಿಎಸ್‍ಎಸ್ ಬೃಹತ್ ಪ್ರತಿಭಟನೆ
ವಿಜಯಪುರ,ಆ,30:ಕರ್ನಾಟಕ ಸರಕಾರವನ್ನು ಅಸ್ಥಿರತೆಯನ್ನುಂಟು ಮಾಡುತ್ತಿರುವದನ್ನು ಮತ್ತು ಕರ್ನಾಟಕ ರಾಜ್ಯಪಾಲರನ್ನು ವಾಪಸ್À ಕರೆಸಿಕೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ನಗರದ ಡಾ. ಅಂಬೇಡ್ಕರ ವೃತ್ತದಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನೆ ಮೆರವಣಿಗೆ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಎಲ್ಲರ ಗಮನ ಸೆಳೆಯಲಾಯಿತು.
ಅನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕÀ ಸಿದ್ದು ರಾಯಣ್ಣವರ ಮಾತನಾಡಿ, ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ವಿರುದ್ಧ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿ.ಜೆ.ಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆ.ಡಿ.ಎಸ್ ಪಕ್ಷವು ಸÉೀರಿಕೊಂಡು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಅಸ್ಥಿರತೆಗೊಳಿಸಬೇಕೆಂದು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವಂತೆ ಕೇಂದ್ರ ಬಿ.ಜೆ.ಪಿ ಸರಕಾರದಿಂದ ಒತ್ತಡ ಹಾಕಿಸಿದ್ದುಮ, ಹೀಗಾಗಿ ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ರೀತಿ ನಡೆದುಕೊಳ್ಳುತ್ತಿರುವದರಿಂದ ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಅಪಾಯವಾಗುತ್ತದೆ. ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದರು.
ರಾಜ್ಯಪಾಲರು ಸಾಂವಿಧಾನಿಕ ಪ್ರತಿನಿಧಿಯಾಗಿ ಕೆಲಸ ಮಾಡುವ ಬದಲು ಕೇಂದ್ರ ಸರಕಾರದ ಕೈಗೊಂಬೆಯಂತೆ ನಡೆದುಕೊಂಡಿದ್ದಾರೆ. ಜೊತೆಗೆ ಸರಕಾರವನ್ನು ಆಸ್ಥಿರಗೊಳಿಸಲು ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ, ಜೊತೆಗೆ ಭೃμÁ್ಟಚಾರ ನಿಯಂತ್ರಣ ಕಾಯಿದೆ17-ಎ ಅಡಿ ಅನುಮತಿ ನೀಡುವ ವೇಳೆ ಪಾಲಿಸಬೇಕಾಗಿರುವ ನಿಯಮಗಳನ್ನು (ಎಸ್‍ಓಪಿ) ಉಲ್ಲಂಘಿಸಲಾಗಿದೆ. 2021 ನೇ ಸೆಪ್ಟೆಂಬರ 3 ರಂದು ಕೇಂದ್ರ ಸರಕಾರ ಈ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಲಾಗಿದೆ. ಇದನ್ನು ಪರಿಗಣಿಸಿಲ್ಲ. ರಾಜ್ಯಪಾಲರು ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕೇಂದ್ರ ಸರಕಾರ ಹಾಗೂ ಬಿ.ಜೆ.ಪಿ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವದು ಸರಿಯಲ್ಲ. ರಾಜ್ಯಪಾಲರ ಈ ನಡವಳಿಕೆಯನ್ನು ಪ್ರತಿಯೊಬ್ಬರು ಖಂಡಿಸಲೇಬೇಕು ಎಂದರು.
ಡಿ.ಎಸ್.ಎಫ್. ಜಿಲ್ಲಾ ಸಂಚಾಲಕ ವಾಯ್.ಸಿ. ಮಯೂರ ಮಾತನಾಡಿ, ಜನರ ಆಶೀರ್ವಾದದಿಂದ ರಚನೆಯಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ರಾಷ್ಟ್ರಪತಿಗಳು ಇದನ್ನು ಪರಿಗಣನೆಗೆ ತೆಗೆದುಕೊಂಡು ಕೂಡಲೆ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು. ಬಹುಮತ ಹೊಂದಿರುವ ಕರ್ನಾಟಕದಲ್ಲಿನ ಆಡಳಿತರೂಢ ಕಾಂಗ್ರೆಸ್ ಸರಕಾರ ಸುಗಮವಾಗಿ ನಡೆಯಲು ಸೂಕ್ತ ಕ್ರಮ ಜರುಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸೋಮನಾಥ ಕಳ್ಳಿಮನಿ ಪ್ರಾಸ್ತಾವಿಕ ಮಾತನಾಡಿದರು.
ಫಯಾಜ್ ಕಲಾದಗಿ, ಸತೀಶ ಅಡವಿ, ರಮೇಶ ಧರಣಾಕರ, ಮಹಾಂತೇಶ ಸಾಸಬಾಳ, ವಿಜಯಕುಮಾರ ಕಾಂಬಳೆ, ರಮೇಶ ಚಲವಾದಿ, ರಮೇಶ ನಿಂಬಾಳಕರ, ದಶರಥ ಇಟಗಿ, ಅವಿನಾಶ ಬಾಣಿಕೋಲ, ರಮೇಶ ವೀರಕರ, ದೇವೇಂದ್ರ ಬಾವಿಮನಿ, ಜಾನು ಗುಡಿಮನಿ, ಅರುಣ ಗವಾರಿ ಮತ್ತಿತತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.