ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒತ್ತಾಯ
(ಸಂಜೆವಾಣಿ ಪ್ರತಿನಿಧಿಯಿಂದ)
ರಾಯಚೂರು,ಆ.೩೦:ಪಿಂಜಾರ ನದಾಫ್ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಅಖಿಲ ಕರ್ನಾಟಕ ಪಿಂಜಾರ ನದಾಫ್ ಮನ್ಸೂರಿ ಹಕ್ಕುಗಳ ಸಂಘ ಒತ್ತಾಯಿಸಿದೆ.
ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ರಾಜ್ಯದಲ್ಲಿ ೩೦ ರಿಂದ ೩೫ ಲಕ್ಷ ಪಿಂಜಾರ ನದಾಫ್ ಸಮುದಾಯದ ಜನಸಂಖ್ಯೆಯಲ್ಲಿ ಈ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕರತಿಕ, ಔದ್ಯೋಗಿಕ, ರಾಜಕೀಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿದೆ.
ಬಡತನದಲ್ಲಿ ಕಷ್ಟಕರ ಜೀವನ ಸಾಗಿಸುತ್ತಿರುವ ಶೋಷಿತ ಸಮಾಜವಾಗಿದೆ. ಕಳೆದ ಹಲವಾರು ವರ್ಷಗಳಿಂದ ಪಿಂಜಾರ ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಹೋರಾಟ ನಡೆಸಲಾಗುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರ ಪಿಂಜಾರ ನದಾಫ್ ಸೇರಿ ೧೩ ಜಾತಿಗಳನ್ನೊಳಗೊಂಡ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದರು. ಇದುವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಪಕ್ಷ ಸಮುದಾಯವನ್ನು ಮತ ಬ್ಯಾಂಕ್‌ಗಳಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
ಪ್ರಸ್ತುತ ರಾಜ್ಯದ ಮುಖ್ಯಮಂತ್ರಿಗಳೂ ಸಹ ಸಮುದಾಯದ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.ಈ ಹಿನ್ನೆಲೆಯಲ್ಲಿ ಪಿಂಜಾರ ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಇಬ್ರಾನ್ ಬಡೇಸಾಬ್, ಮಹಿಳಾ ಜಿಲ್ಲಾಧ್ಯಕ್ಷೆ ಖಾಸಿಂ.ಬಿ, ಸೇರಿದಂತೆ ಪದಾಧಿಕಾರಿಗಳಾದ ರಾಜ್‌ಮೋಹನ್, ಯಾಕೂಬ್,ಶಾಲಂಸಾಬ್, ಮೆಹಬೂಬ್,ಶಫಿ, ಜಮೀರ್, ಮಹಮ್ಮದ್ ರಫಿ, ಹುಸೇನ್ ಬಾಷ, ಮೌಲಾ. ಎನ್‌ಟಿಆರ್, ಮೊಹ್ಮದ್‌ರಫಿ, ಮೊಹ್ಮದ್ ಅಸ್ಲಾ, ಹಿಮಾಮ್‌ಬಾಷ, ನಸೀರ್ ಅಹ್ಮದ್, ಹುಸೇನ್ ಬಾಷ ಇತರರು ಇದ್ದರು.ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಒತ್ತಾಯ