ಸೆ. ೧೭ ಕಲಬುರ್ಗಿಯಲ್ಲಿ ಸಿಎಂ ಧ್ವಜಾರೋಹಣ
(ಸಂಜೆವಾಣಿ ಪ್ರತಿನಿಧಿಯಿಂದ)
ರಾಯಚೂರು,ಆ.೩೦: ಸೆ. ೧೭ ರಂದು ನಡೆಯಲಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಉಳಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ರಾಯಚೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟೀಲ್, ಬಳ್ಳಾರಿಯಲ್ಲಿ ಉಸ್ತುವಾರಿ ಸಚಿವ ರಹೀಂಖಾನ್, ಕೊಪ್ಪಳದಲ್ಲಿ ಉಸ್ತುವಾರಿ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಬೀದರ್‌ನಲ್ಲಿ ಉಸ್ತುವಾರಿ ಸಚಿವ ಈಶ್ವರ್‌ಖಂಡ್ರೆ, ಯಾದಗಿರಿಯಲ್ಲಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ವಿಜಯನಗರದಲ್ಲಿ ಉಸ್ತುವಾರಿ ಸಚಿವ ಬಿ.ಝೆಡ್ ಜಮೀರ್‌ಆಹ್ಮದ್‌ಖಾನ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಸಿಬ್ಬಂದಿ ಆಡಳಿತ ಇಲಾಖೆ ಸುಧಾರಣೆ ಅಧೀನ ಕಾಂiiದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.