ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ
ರಾಯಚೂರು,ಆ೩೦:ವಿದ್ಯಾರ್ಥಿಗಳು ಪಠ್ಯದ ಜೊತಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಒತ್ತುಕೊಡುವುದರಿಂದ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಲ್ಲಿಸಹಾಯಕವಾಗುತ್ತದೆ ಹಾಗೂ ಕ್ರೀಡೆಗಳಿಂದ ಆರೋಗ್ಯ ಚೆನ್ನಾಗಿರುತ್ತದೆ.ಭಾರತದಲ್ಲಿ ವಿವಿಧ ಕ್ರೀಡೆಗಳು ಹೆಚ್ಚಾಗಬೇಕಾಗಿದೆ. ನಮ್ಮ ವಿಶ್ವವಿದ್ಯಾಲಯದವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಮತ್ತುಕ್ರೀಡಾಪಟುಗಳನ್ನಾಗಿ ಮಾಡಿ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟಕ್ಕೆ ಬೆಳೆಯುವಂತಾಗಬೇಕು ಎಂದು ರಾಯಚೂರು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರೊ.ಎಂ.ಯರಿಸ್ವಾಮಿ ಹೇಳಿದರು.
ರಾಯಚೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಮತ್ತು ಕ್ರೀಡಾ ವಿಜ್ಞಾನವಿಭಾಗವು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಮೇಜರ್‌ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳು ನಮ್ಮನ್ನು ನಾವು ದೈಹಿಕವಾಗಿ, ಮಾನಸಿಕವಾಗಿಆರೋಗ್ಯವಾಗಿರುವಂತೆ ಮಾಡುತ್ತವೆ. ನಮ್ಮಲ್ಲಿರುವ ಹಿಂಜರಿಕೆಯನ್ನು ಬಿಟ್ಟು ಕ್ರೀಡಾ
ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಸ್ಫರ್ಧಾ ಮನೋಭಾವ ತೋರಿಸಬೇಕುಎಂದು ಹೇಳಿದರು.ಮೇಜರ್ ಧ್ಯಾನ್ಚಂದ್ ಸ್ಮರಣಾರ್ಥ ಆಯೋಜಿಸಿದ್ದ ಕ್ರಿಕೆಟ್, ವಾಲಿಬಾಲ್, ಶಾರ್ಟ್‌ಪುಟ್,
ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜೇತರಾದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆರಾಯಚೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಹರೀಶ ರಾಮಸ್ವಾಮಿ ಅವರು
ಟ್ರೋಫಿಯನ್ನು ವಿತರಿಸಿದರು.
ವಿದ್ಯಾರ್ಥಿಕಲ್ಯಾಣಾಧಿಕಾರಿ ಡಾ.ಜಿ.ಎಸ್.ಬಿರಾದಾರ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕ್ರೀಡಾವಿಭಾಗದ ಸಂಯೋಜಕ ಮಲ್ಲಿಕಾರ್ಜುನ.ಎನ್ ಪ್ರಾಸ್ರಾವಿಕ ಮಾತನಾಡಿ, ಸ್ವಾಗತಿಸಿದರು. ಅತಿಥಿಉನ್ಯಾಸಕರಾದಇಂಗ್ಲೀಷ ವಿಭಾಗದ ಅನಿಲ್ ಅಪ್ರಾಳ ಬಹುಮಾನ ವಿತರಣೆಕಾರ್ಯಕ್ರಮ ನಿರೂಪಿಸಿದರು, ಪತ್ರಿಕೋದ್ಯಮ ವಿಭಾಗದ ಡಾ.ಗೀತಮ್ಮ ನಿರೂಪಿಸಿದರು, ಭೌತಶಾಸ್ತ್ರ ವಿಭಾಗದ ಸಪ್ನಾ ವಂದಿಸಿದರು.