ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಂಜೆವಾಣಿ ವಾರ್ತೆ.
ಸಿಂಧನೂರು ಆ.೩೦ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರ ಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಲಿಂಗನಗೌಡ ಸಿಂಧನೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದರು.
ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರ ಗಳಲ್ಲಿರುವ ಖಾಲಿ ಇರುವ ೧೪ ಅಂಗನವಾಡಿ ಕಾರ್ಯಕರ್ತೆ,೩೮ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ೩೦-೮-೨೦೨೪ ರಿಂದ ೨೯-೯-೨೦೨೪ ರವರೆಗೆ ಕಾಲಾವಕಾಶ ನೀಡಲಾಗಿದೆ .ಹೆಚ್ಚಿನ ಮಾಹಿತಿ ಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸಂಪರ್ಕಿಸಿ ಎಂದು ತಿಳಿಸಿದರು.