ರಾಷ್ಟ್ರಪಿತ ನೆನಪಿಸಿದ ಸರ್ವಧರ್ಮ ಸಭೆ
ಸಂಜೆವಾಣಿ ನ್ಯೂಸ್
ಮೈಸೂರು: ಅ.03:- ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಜನ್ಮದಿನಾಚರಣೆ ಪ್ರಯುಕ್ತ ಗಾಂಧಿವೃತ್ತದಲ್ಲಿ ಗಾಂಧಿಪ್ರತಿಮೆಗೆ ವಾಲಾರ್ಪಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ತನ್ವೀರ್ ಸೇಠ್,ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೆÇಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ಎನ್.ವಿಷ್ಣುವರ್ಧನ್, ನಗರಪಾಲಿಕೆ ಆಯುಕ್ತ ಆಸಾದ್ ಉರ್ ರೆಹಮಾನ್ ಷರೀಫ್,ಡಿಸಿಪಿ ಎಸ್.ಜಾನವಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಹಬೀಬ, ಜಿಪಂ ಮುಖ್ಯ ಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ,ನಗರಪಾಲಿಕೆ ಅಧೀಕ್ಷಕ ಅಭಿಯಂತರ ಕೆ.ಜೆ.ಸಿಂಧು, ಎಇಇ ಸತ್ಯಮೂರ್ತಿ ಮೊದಲಾದವರು ವಾಲಾರ್ಪಣೆ ಮಾಡಿ ಪುಷ್ಪಾರ್ಚನೆಗೈದರು.
ಪುರಭವನದಲ್ಲಿ ಸರ್ವಧರ್ಮ ಪ್ರಾರ್ಥನೆ: ಸರ್ವಧರ್ಮ ಗುರುಗಳು ಸಾಮರಸ್ಯದ ಪ್ರಾರ್ಥನೆ ಸಲ್ಲಿಸುವ ಮೂಲಕ ಗಾಂಧೀಜಿ?ಂವರ ಜನ್ಮದಿನವನ್ನು ಆಚರಿಸಲಾಯಿತು.
ಜಿಲ್ಲಾಡಳಿತ, ನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ, ಮುಸ್ಲಿಂ, ಬೌದ್ಧ ಸಿಖ್,ಹಾಗೂ ಜೈನಧರ್ಮ ಗುರುಗಳು ಭಾಗಿಯಾಗಿದ್ದರು. ಭಗವದ್ಗೀತೆ, ಕುರಾನ್, ಬುದ್ಧದಮ್ಮ ಹಾಗೂ ಜೈನ ಧರ್ಮದ ತತ್ವ ತಿಳಿಸಿದರು.
ಗಾಂಧೀ ಜಯಂತಿ ಪ್ರಯುಕ್ತ ನಗರ ಪಾಲಿಕೆ ವತಿಯಿಂದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ, ಜಲಶಕ್ತಿ, ಪರಿಸರ ಹಾಗೂ ಹೊಗೆ ರಹಿತ ಅಡುಗೆ ಮನೆ ಮುಂತಾದವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಲು ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬಹುಮಾನ ವಿತರಿಸಿದರು. ಮಾಜಿ ಮಹಾಪೌರ ಪಿ.ವಿಶ್ವನಾಥ್, ಸುರೇಶ್ ಕುಮಾರ್ ಜೈನ್, ವಾರ್ತಾ ಇಲಾಖೆ ಉಪ ನಿರ್ದೇಶಕ ಅಶೋಕ್ ಕುಮಾರ್, ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್‍ಗೌಡ,ನಗರಪಾಲಿಕೆ ಮಾಜಿ ಸದಸ್ಯ ವಾಸುದೇವ್ ಮತ್ತಿತರರು ಹಾಜರಿದ್ದರು.