ಕ್ರೀಡೆ ಆರೋಗ್ಯಕ್ಕೆ ಅತ್ಯಾವಶ್ಯಕ :ಯಮುನ
ಸಂಜೆವಾಣಿ ವಾರ್ತೆ
ಮಂಡ್ಯ: ಆ.30:- ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಹಾಗೂ ಶಾರೀರಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ಗೊರವಾಲೆ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕಿ ಯಮುನ ತಿಳಿಸಿದರು.
ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಣಗಣದಲ್ಲಿ ನಡೆದ 17 ವರ್ಷದ ಒಳಗಿನ ಬಾಲಕರ ವಿಭಾಗದ 5 ಕಿ, ಮಿ. ಮ್ಯಾರಾಥಾನ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿದ್ಯಾರ್ಥಿಯಾದ ಜಿ,ವಿ,ಭುವನ್ ರವರಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕ್ರೀಡೆ ಜೀವನದ ಆರೋಗ್ಯಕ್ಕೆ ತುಂಬಾ ಅತ್ಯಾವಶ್ಯಕವಾಗಿದೆ, ಆದುದರಿಂದ ಪ್ರತಿಯೊಬ್ಬರೂ ಕ್ರೀಡೆಯನ್ನು ಜೀವನದ ಅವಿಭಾಜ್ಯ ಅಂಗ ಎಂದು ಭಾವಿಸಬೇಕು ಎಂದರು.ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದ ಕೋಟಾದಡಿಯೂ ಸಾಕಷ್ಟು ಉದ್ಯೋಗವಕಾಶಗಳಿವೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ವಿದ್ಯಾರ್ಥಿ ಜೀವನ ನಿಮಗೆ ಪ್ರಮುಕ ಘಟ್ಟ. ಹಾಗಾಗಿ ವಿದ್ಯಾರ್ಥಿ ದಿಶೆಯಿಂದಲೇ ಒಳ್ಳೆಯ ಹವ್ಯಾಸಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದರು.ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಕ್ರೀಡಾ ಕೂಟದಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೆ ಎಸ್ ರಾಮಸಂಜೀವಯ್ಯ ಅವರನ್ನು ಅಭಿನಂದಿಸಲಾಯಿತ್ತು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಹನುಮಂತ ಪೂಜಾರಿ, ಮುತ್ಯಾಲಪ್ಪ ಕೆ ಆರ್, ನಳಿನ ಆರ್, ಕಿರಣ್ ಕುಮಾರ್, ಹಾಗೂ ಶಂಕರ್ ಹಾಜರಿದ್ದರು