ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.30-ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿ ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಯನ್ನು ಎಂ.ಎಸ್.ಐ.ಎಲ್. ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ನಗರದ ಪ್ರವಾಸಿ ಮಂದಿರದಲ್ಲಿಂದು ಬೀಳ್ಕೊಟ್ಟರು.
ಕನ್ನಡ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ‘ಕರ್ನಾಟಕ ಸಂಭ್ರಮ-50’ ಜ್ಯೋತಿ ರಥಯಾತ್ರೆಯು ಜಿಲ್ಲೆಯಲ್ಲಿ 4 ದಿನಗಳ ಕಾಲ ಸಂಚರಿಸುತ್ತಿದ್ದು, ಚಾಮರಾಜನಗರ ತಾಲೂಕಿನಿಂದ ಗುಂಡ್ಲುಪೇಟೆಗೆ ತೆರಳುತ್ತಿರುವ ಹಿನ್ನೆಲೆ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕನ್ನಡ ಬಾವುಟ ತೋರುವ ಮೂಲಕ ರಥಯಾತ್ರೆಗೆ ಬೀಳ್ಕೊಡುಗೆ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರಿಂದ ಮರುನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರಾಜ್ಯಾದ್ಯಂತ ಕರ್ನಾಟಕ ಸಂಭÀ್ರಮ-50 ಜ್ಯೋತಿ ರಥಯಾತ್ರೆ ಆರಂಭಿಸಿದೆ. ನಾವೆಲ್ಲಾ ಕನ್ನಡಿಗರು. ಕನ್ನಡ ಭಾಷೆ, ನೆಲ, ಜಲ ಉಳಿಸಿ, ಅಭಿವೃದ್ಧಿ ಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಎಲ್ಲರಿಗೂ ಕರ್ನಾಟಕ ಸಂಭÀ್ರಮದ ಶುಭಾಷಯಗಳು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಶೀಲ್ದಾರ್ ಗಿರಿಜಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಋಗ್ವೇದಿ, ಕಂದಾಯ ಇಲಾಖೆಯ ಮಹೇಶ್, ರಾಜೇಶ್, ಕನ್ನಡಪರ ಸಂಘಟನೆಗಳ ಮುಖಂಡರು, ಇತರರು ಇದೇ ಸಂದರ್ಭದಲ್ಲಿ ಇದ್ದರು.