ಗಣೇಶ ಹಬ್ಬ ಶಾಂತಿ ಸಭೆ
ಕೋಲಾರ.ಆ,೩೦- ಮುಂಬರಲಿರು ಗಣೇಶ ಚತುರ್ಥಿ ಹಬ್ಬದ ಆಚರಣೆಯ ಹಿನ್ನಲೆಯಲ್ಲಿ ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕ ಕ್ರಮವಾಗಿ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರೊಂದಿಗೆ ಶಾಂತಿ ಸಭೆಯನ್ನು ಆಯಾಯಾ ಠಾಣೆಯ ಪೊಲೀಸ್ ಅಧಿಕಾರಿಗಳ ನೇತ್ರತ್ವದಲ್ಲಿ ಆಯೋಜಿಸಲಾಗಿತ್ತು.
ಗಣೇಶ ಚತುರ್ಥಿ ಹಬ್ಬದಲ್ಲಿ ಸಾರ್ವಜನಿಕವಾಗಿ ಪ್ರತಿಷ್ಟಾಪನೆ ಮಾಡುವ ಸಂಘಟನೆಗಳು ಪಾಲಿಸ ಬೇಕಾದ ನಿಯಮಗಳನ್ನು ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿ. ಯಾವೂದೇ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಪ್ರತಿಯೊಬ್ಬರು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗಳನ್ನು ಕಾಪಾಡಲು ಸಹಕಾರ ನೀಡ ಬೇಕೆಂದು ಮನವಿ ಮಾಡಲಾಯಿತು.