ಕ್ರೀಡೆಗಳಲ್ಲಿ ಭಾಗವಹಿಸುವಿಕೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ ಸಾಧ್ಯ
ಕಲಬುರಗಿ:ಆ.29:ಕ್ರೀಡೆಯಲ್ಲಿ ದೊಡ್ಡದು-ಸಣ್ಣದು ಎಂಬುದಿಲ್ಲ. ಯಾವುದೇ ಕ್ರೀಡೆಯಲ್ಲಿ ಸಾಧನೆ ಮಾಡಬೇಕಾದರೆ, ಅದರ ನೀತಿ-ನಿಯಮಗಳ ಬಗ್ಗೆ ಸರಿಯಾಗಿಅರ್ಥಮಾಡಿಕೊಂಡು, ಪೂರ್ವಸಿದ್ಧತೆಯೊಂದಿಗೆ ತೊಡಗಬೇಕು. ದೊರೆತ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡುವುದರೊಂದಿಗೆ ನಮ್ಮ ಭಾಗಕಡಿಮೆಯಿಲ್ಲವೆಂದು ತೋರಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯವೃದ್ಧಿಯಾಗುತ್ತದೆ ಎಂದು ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುಲಿಂಗಯ್ಯ ಮಠ ಹೇಳಿದರು.
ನಗರದ ಶಹಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಹಾಗೂ ಕ್ರೀಡಾಪಟು ಚನ್ನಬಸಪ್ಪ ಗಾರಂಪಳ್ಳಿ ಮಾತನಾಡಿ, ಹಾಕಿ ಕ್ಷೇತ್ರದ ಮೂಲಕ ಭಾರತದ ಕೀರ್ತಿಯನ್ನು ವಿಶ್ವದೆಲ್ಲೆಡೆ ಪಸರಿಸಿದ ಧ್ಯಾನಚಂದ್‍ರಕೊಡುಗೆ ಅವಿಸ್ಮರಣೀಯವಾಗಿದೆ. ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತವಾದ ಪ್ರೋತ್ಸಾಹ ನೀಡಿದರೆ ಮಾತ್ರ ಕ್ರೀಡಾಕೇತ್ರ, ಕ್ರೀಡಾಪಟುಗಳು ಬೆಳವಣಿಗೆ ಹೊಂದುವುದರ ಮೂಲಕ ದೇಶದ ಕೀರ್ತಿ ಉನ್ನತ ಸ್ಥಾನಕ್ಕೇರಲು ಸಾಧ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ವಿಜಯನಗರ ಕಾಲನಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಪ್ರಕಾಶ ಕಟ್ಟಿಮನಿ, ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಶಿಕ್ಷಕರಾದ ರೋಹಿತ್, ಯೆರಪೂಲ್, ಚಂದ್ರಲೇಖಾ ಎಸ್.ಪೂರ್ಮಕರ್, ಶಿಲ್ಪಾ ಎಸ್.ಖೇಡ್, ಪ್ರಿಯಾಂಕಾ ಪಿ.ಕುಲಕರ್ಣಿ, ಪ್ರೀತಿ ಜೆ.ಬಿರಾದಾರ, ಪೂರ್ಣಿಮಾ ಸಿ.ಪಾಟೀಲ, ಖಮರುನ್ನೀಸ್ ಶೇಖ್, ಸರಸ್ವತಿ ಎಂ.ಬಿರಾದಾರ, ಮಲ್ಲಮ್ಮ ಬಿ.ಕೋಣೀನ್, ವರ್ಷಾರಾಣಿ ಪಾಟೀಲ, ಕಾಶಮ್ಮ ಚಿನ್ಮಳ್ಳಿ, ಸೇವಕಿಯರಾದ ನಾಗಮ್ಮ, ಸುನಿತಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.