ಸಣ್ಣ ಕೈಗಾರಿಕಾ ಸಚಿವರ ಪ್ರವಾಸ
ಕಲಬುರಗಿ:ಆ.29:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಯಾದಗಿರಿ ಜಿಲ್ಲೆಯ ಶಹಾಪೂರಕ್ಕೆ ಪ್ರಯಾಣಿಸಿ, ಶಹಾಪೂರದಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮರಳಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಆಗಸ್ಟ್ 31 ರಂದು ಕಲಬುರಗಿಯಿಂದ ರಸ್ತೆ ಮೂಲಕ ಶಹಾಪೂರಕ್ಕೆ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕಲಬುರಗಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 2 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಶಹಾಪೂರಕ್ಕೆ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ರಾತ್ರಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 3 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಕೆಂಭಾವಿಗೆ ಪ್ರಯಾಣಿಸಿ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.