ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ
ಕಲಬುರಗಿ:ಆ.29: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜುಲೈ 8 ಹಾಗೂ 9 ರಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನದಲ್ಲಿ ಚರ್ಚಿಸಲಾದ ವಿಷಯಗಳ ಕುರಿತಂತೆ ಜಿಲ್ಲಾವರು ಅಂಕಿ-ಅಂಶಗಳ ಪ್ರಗತಿಯ ನಿರಂತರ ಪರಿಶೀಲನೆ ಮಾಡಲು ಮುಖ್ಯಕಾರ್ಯದರ್ಶಿಗಳು ನಿರ್ದೇಶಿಸಿರುವ ಹಿನ್ನಲೆಯಲ್ಲಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಅಧ್ಯಕ್ಷತೆಯಲ್ಲಿ ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಕಂದಾಯ., ವಾಣಿಜ್ಯ ಇಲಾಖೆಯ, ಸಣ್ಣ ನೀರಾವರಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಸತಿ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಶರಣಯ್ಯ ಮಠಪತಿ ಸೇರಿದಂತೆ ಸೇರಿದಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮ್ಮದ್ ಪಟೇಲ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಅಲ್ಲಾಭಕ್ಷ್, ಹಾಗೂ ಪ್ರಾದೇಶಿಕ ಸಾರಿಗೆ ಉಪ ಆಯುಕ್ತ ನೊರ್ ಮಹ್ಮದ್ ಭಾಷ್ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.