ಖಾಸಗಿ ಶಾಲೆಗಳಲ್ಲಿ ದುಬಾರಿ ಶಾಲಾ ಶುಲ್ಕ ನಿಯಂತ್ರಿಸಿ
ಭಾಲ್ಕಿ:ಆ.29: ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ತಾಲೂಕಿನಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ ಸಿಂಗ್ ಅವರನ್ನು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು.
ಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕದ ಹೆಸರಿನಲ್ಲಿ ಪೋಷಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸಲು ನಿಯಮನುಸಾರ ಶಾಲಾ ಪ್ರವೇಶ ಪ್ರಾರಂಭದಲ್ಲೇ ಶುಲ್ಕ ನಿಗದಿಪಡಿಸಿ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಸೂಚನೆ ನೀಡಬೇಕು.
ಜತೆಗೆ ವಿವಿಧೆಡೆ ಟಿನ್‍ಶೆಡ್‍ಗಳಲ್ಲಿ ನಿಯಮ ಬಾಹಿರವಾಗಿ ಶಾಲಾ ತರಗತಿಗಳನ್ನು ನಡೆಯುತ್ತಿದ್ದು ಪರಿಶೀಲಿಸಿ ಅಂತಹ ಶಾಲೆಗಳ ಮಾನ್ಯತೆ ರದ್ದು ಪಡಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸುದೀಪ ತೂಗಾವೇ, ಬಸವರಾಜ ಕಾರಬಾರಿ, ಬಾಲಾಜಿ ಮೇಘೆ, ರಾಜರತನ ಗಡಿಪಾಟೀಲ್ ಸೇರಿದಂತೆ ಹಲವರು ಇದ್ದರು.