ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ
ಬೀದರ:ಆ.29:ಗ್ರಾಮೀಣ ಪ್ರದೇಶದ ಪ್ರತಿ ಹಳ್ಳಿಹಳ್ಳಿ ಯಲ್ಲೂ ಸರ್ಕಾರಿ ಶಾಲೆ ಕಟ್ಟಡ , ರಸ್ತೆಗಳ ಅಭಿವೃದ್ಧಿಗೆ . ಮೂಲ ಸೌಕರ್ಯ ಒದಗಿಸಿಕೊಡುವುದು ನನ್ನ ಕರ್ತವ್ಯ ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಕಾಡವಾದ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮೂರು ಕೊಠಡಿಗಳು, ಪ್ರಾಥಮಿಕ ಶಾಲೆಯಲ್ಲಿ ಎರಡು ಕೊಠಡಿ ನಿರ್ಮಾಣ ಹಾಗೂ ಶೌಚಾಲಯ ನಿರ್ಮಾಣ ಸೇರಿ ಸುಮಾರು 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಇದೆ ವೇಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ದೈಹಿಕ ಶಿಕ್ಷಣವು ಒಂದು ಪ್ರಮುಖ ಶಿಕ್ಷಣವಾಗಿದ್ದು, ವಿದ್ಯಾರ್ಥಿಗಳು ಕೆಲವು ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತರಾಗಲು ಅನುವು ಮಾಡಿಕೊಡುತ್ತದೆ. ಇದು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮೀರಿ ಕಲಿಯಲು ಸಹಾಯ ಮಾಡುತ್ತದೆ. ದೈಹಿಕ ಶಿಕ್ಷಣದ ಮೂಲಕ ಅವರು ಶೈಕ್ಷಣಿಕವಾಗಿ ಮಾತ್ರವಲ್ಲದೆ ವೃತ್ತಿಪರವಾಗಿಯೂ ಉತ್ತಮ ಸಾಧನೆ ಮಾಡುತ್ತಾರೆ. ವಿದ್ಯಾರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ ಹೀಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ ಎಂದು ವಿಧ್ಯಾರ್ಥಿಗಳಿಗೆ ತಿಳಿಸಿದರು.
ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಕ್ರೀಡಾ ಆಸಕ್ತಿ ಬೆಳೆಯಲು ಸಾಧ್ಯವಿದೆ. ಮಕ್ಕಳ ಕ್ರೀಡಾ ಪ್ರತಿಭೆ ರಾಷ್ಟ್ರ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ದೈಹಿಕ ಶಿಕ್ಷಕರು ಮಾರ್ಗದರ್ಶನ ನೀಡಿ ವಿಧ್ಯಾರ್ಥಿಗಳು ಹಂತ ಹಂತವಾಗಿ ಉನ್ನತ ಸ್ಥಾನ ಪಡೆದು ಕ್ರಿಡೆಯಲ್ಲಿ ಸಾಧನೆ ಮಾಡಬೇಕು ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು ಇದೀಗ ಶಾಲೆಗೆ ಅನುದಾನ ಕಲ್ಪಿಸಲಾಗಿದೆ ಇನ್ನೂ ಹೆಚ್ಚಿನ ಮೂಲ ಸೌಕರ್ಯ ಒದಗಿಸಲು ನಾನು ಸದಾ ಸಿದ್ಧ ವಿಧ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಕುಮಾರ ಸ್ವಾಮಿ, ಮಾಣಿಕಪ್ಪ ಖಾಶೆಂಪುರ, ಘಾಳೇಪ್ಪ ಚಟ್ಟನಳ್ಳಿ, ಬಸವರಾಜ ಆಣದೂರೆ, ಮನಮಥ ಮೀನಕೇರಾ, ಗುರುನಾಥ ಮೀನಕೇರಾ, ಬಸವರಾಜ ಹುಗಾರ, ಶ್ರಿ?ನಿವಾಸ ಕುಲಕರ್ಣಿ, ಮೋಹನ್ ಚೊಂಡಿ, ದತ್ತಾತ್ರೇಯ ಬುಕ್ಕಿಗರ್, ಸಂತೋಷ ಬರುರೆ, ಲಕ್ಷ್ಮಣರಾವ ಸಿಂದಬಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.