ಶಾಸಕರಿಂದ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಸಂಜೆ ವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಆ.29 ಕೆಕೆಆರ್‌ಡಿಬಿಯಡಿ ಒಂದು ಕೋಟಿ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಕೆ ನೇಮಿರಾಜ್ ನಾಯ್ಕ್ ಭೂಮಿ ಪೂಜೆ ನೆರವೇರಿಸಿದರು.
ತಾಲೂಕಿನ ವರದಾಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದರ್ಶನ ಪಡೆದುಕೊಂಡು, ಕಲ್ಯಾಣ ಕರ್ನಾಟಕ ಪ್ರದೇಶ ಮಂಡಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಕ್ಷೇತ್ರದಲ್ಲಿ ನೀರಾವರಿ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಮೂಲಕ ತಾಲೂಕನ್ನು ಶೈಕ್ಷಣಿಕ ಜಿಲ್ಲೆಯಾಗಿ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಪಿ ಸೂರ್ಯಬಾಬು, ಕಡ್ಲಪ್ಪ, ಮೂಗಲಿ ಭೀಮಣ್ಣ, ಮಾದೇಗೌಡರು, ಬಾಷೆ ಸಾಹೇಬ್,ಪಿ ರಾಜಲಿಂಗಪ್ಪ, ಸೋಮಶೇಖರ, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ಶಾಲಾ ಶಿಕ್ಷಕರು, ಗುತ್ತಿಗೆದಾರ ದೊಡ್ಡಬಸಪ್ಪ, ಊರಿನ ಯುವಕರು ಉಪಸ್ಥಿತಿ ಇದ್ದರು