ವೆಂಕಟೇಶ್ವರ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ
ಸಂಜೆವಾಣಿ ವಾರ್ತೆ
ಹಿರಿಯೂರು ಆ.೨೯;  ನಗರದ  ಚಿಕ್ಕಪೇಟೆ ಬಳಿ ಇರುವ  ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜೆ, ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಮಹಿಳಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಕೃಷ್ಣ ಭವನ್ ಮಾಲೀಕರಾದ ರಾಧಾಕೃಷ್ಣ ಮತ್ತು ಸಹೋದರರು ಸೇರಿದಂತೆ ಅನೇಕ ಭಕ್ತರು ಪಾಲ್ಗೊಂಡಿದ್ದರು.