ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçÃ ಅವರ ಕೊಡುಗೆ ಅನನ್ಯ: ಜಿಲ್ಲಾಧಿಕಾರಿ ಟಿ. ಭೂಬಾಲನ್
ಸಂಜೆವಾಣಿ ವಾರ್ತೆ,
ವಿಜಯಪುರ,ಅ.೩: ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçÃ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮಹನೀಯರ ಕುರಿತು ಇಂದಿನ ಜನರು ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳನ್ನು ಹಾಗೂ ಆದರ್ಶ ವಿಚಾರಗಳನ್ನು ಅರಿತುಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರö್ಯ ದೊರಕಿಸುವಲ್ಲಿ ಮಹತ್ವರ ಪಾತ್ರ ವಹಿಸಿ ಸತ್ಯ, ಅಹಿಂಸೆಯ ಹೋರಾಟದ ಹಾದಿ ಅನುಸರಿಸಿ ವಿಶ್ವಕ್ಕೆ ದೊಡ್ಡ ಸಂದೇಶ ಸಾರಿದವರು ಮಹಾತ್ಮ ಗಾಂಧೀಜಿಯವರು. ವಿಶ್ವಸಂಸ್ಥೆಯು ವiಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಅಂತರಾಷ್ಟಿçÃಯ ಮಟ್ಟದಲ್ಲಿ ಆಚರಿಸುತ್ತಿರುವುದು ವಿಶ್ವ ಅವರನ್ನು ಗೌರವಿಸುವ ಪರಿಯಾಗಿದೆ ಎಂದು ಹೇಳಿದರು.
ತ್ಯಾಗ, ಸತ್ಯ, ಅಹಿಂಸೆಯAತಹ ಇವರ ವಿಚಾರಗಳು ಇಂದಿಗೂ ಎಂದೆAದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಸತ್ಯ ಶಾಂತಿ, ತ್ಯಾಗಮೂರ್ತಿಯಾದ ಇವರ ಜೀವನಾರ್ದಶ ಅರಿಯಬೇಕು. ಲಾಲ್ ಬಹದೂರ್ ಶಾಸ್ತಿçÃ ಅವರು ನೀಡಿದ ಜೈ ಜೈವಾನ್ ಜೈ ಕಿಸಾನ್ ಘೋಷವಾಕ್ಯ ರೈತ ಹಾಗೂ ಸೈನಿಕರ ಬಗೆಗಿನ ಅಪಾರ ಕಾಳಜಿಗೆ ಧ್ಯೋತಕವಾಗಿದ ಎಂದು ಹೇಳಿದರು. ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçÃ ಅವರ ಜೀವನಾದರ್ಶಗಳು ನಮ್ಮೆಲ್ಲರ ಬದುಕಿಗೆ ಸ್ಪೂರ್ತಿದಾಯಕವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಗಾಂಧಿ ಭವನವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರö್ಯ ಚಳವಳಿಯ ಕುರಿತಾಗಿ ಸಮಗ್ರ ನೋಟ ಇಲ್ಲ್ಲಿ ಕಾಣಬಹುದಾಗಿದೆ. ಗಾಂಧಿ ಭವನವು ಮಾಹಿತಿ ಆಗರವೇ ಆಗಿದೆ. ಸಾರ್ವಜನಿಕರು, ವಿದ್ಯಾಥಿಗಳು ಗಾಂಧಿ ಭವನವನ್ನು ವೀಕ್ಷಿಸಿ ಗಾಂಧೀಜಿವರ ಕುರಿತಾಗಿ ಹೆಚ್ಚು ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಹನೀಯರ ಜೀವನದ ತತ್ವಗಳನ್ನು ಸ್ಮರಿಸಲು ಹಾಗೂ ಅವರಿಗೆ ಗೌರವ ಅರ್ಪಿಸಲು ಜಯಂತಿ ಆಚರಣೆ ಮಾಡುತ್ತೇವೆ. ಸ್ವಾತತ್ರö್ಯ ಹೋರಾಟದ ಮುಂಚೂಣಿಯಲಿದ್ದ ಮಹಾತ್ಮ ಗಾಂಧಿ ಅವರು ಸಾಮಾಜಿಕ, ರಾಜಕೀಯ ಬದಲಾವಣೆಗೆ ದೇಶಾದ್ಯಂತ ಸಂಚರಿಸಿ ಜನರ ಸಮಸ್ಯೆ ಅರಿತು ಅವಿರತವಾಗಿ ಶ್ರಮಿಸಿದರು. ಗ್ರಾಮಗಳ ಅಭಿವೃಧಿ ದೇಶದ ಅಭಿವೃದ್ಧಿ ಎಂಬ ಗ್ರಾಮ ಸ್ವರಾಜ್ಯ ಪರಿಕಲ್ಪನೆ ತಂದರು ಎಂದು ಹೇಳಿದರು.
ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಕುರಿತಾಗಿ ಮೀನಾಕ್ಷಿ ಪಾಟೀಲ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯ್ಕ, ಮೇಯರ್ ಮಹೇಜಬಿನ್ ಹೊರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಎಡಿಸಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತÀ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡ್ಡೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಸಂತೋಷ ಭೋವಿ, ಪೀಟರ್ ಅಲೆಕ್ಸಾಂಡರ್, ಅಶೋಕ ಘೋಣಸಗಿ, ಬಾಬುಗೌಡ ಪಾಟೀಲ, ನಿಲೇಶ ಬೇನಾಳ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ನಿವೃತ್ತ ಶಿಕ್ಷಕ ಎ.ಎಚ್. ಮಮದಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.