ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಗಾಂಧಿ ಜಯಂತಿ ಆಚರಣೆ
ಕಲಬುರಗಿ:ಅ.2:ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಬುಧವಾರ ಆಚರಿಸಲಾಯಿತು.
ಕಲಬುರಗಿ ಕೇಂದ್ರ ಕಾರಾಗೃಹದ ಪ್ರಭಾರಿ ಮುಖ್ಯ ಅಧೀಕ್ಷಕರಾದ ಬಿ. ಸುರೇಶ ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿರವರ ಭಾವಚಿತ್ರಗಳಿಗೆ ಪುಷ್ಪಾರ್ಚಣೆ ಮಾಡಿ ಮಾತನಾಡಿ, ಗಾಂಧೀಜಿಯವರ ಆಶಯದಂತೆ ಪ್ರತಿಯೊಬ್ಬರು ಶಿಕ್ಷಣ ಮತ್ತು ಉತ್ತಮ ಆರೋಗ್ಯವನ್ನು ಪಡೆಯಬೇಕು. ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಹಾಯಕ ಅಧೀಕ್ಷಕÀ ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಜೈಲರ್‍ಗಳಾದ ಸುನಂದ ವಿ., ಸೈನಾಜ್ ಎಂ. ನಿಗೇವಾನ್, ಸಾಗರ ಪಾಟೀಲ್, ಪರಮಾನಂದ ಹರವಾಳ, ಕಾರಾಗೃಹ ಇಲಾಖೆಯ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಈ ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಾ ಬಂದಿಗಳು ಭಜನೆ ಗೀತೆಗಳನ್ನು ಹಾಡಿದರು.