ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ
ಗದಗ,ಅ.6: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದಿಂದ ಗದಗ ಸಿದ್ಧಲಿಂಗೇಶ್ವರ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ವಿಜಯಕುಮಾರ್ ಬ. ದೊಡ್ಡಮನಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದಕ್ಕೆ ಸಂತಸ ವ್ಯಕ್ತ ಪಡಿಸಿ ವಿಜಯಕುಮಾರ್ ಬ ದೊಡ್ಡಮನಿ ಅವರಿಗೆ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಾರ್ತಾಧಿಕಾರಿ ವಸಂತ.ಬಿ.ಮಡ್ಲೂರ, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀಶೈಲ್ ಬೀರಕಬ್ಬಿ ಹಾಜರಿದ್ದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪೂರ್ಣಿಮಾ ಹೊಸಮನಿ, ಕಾಲೇಜಿನ ಬೋಧಕ ಸಿಬ್ಬಂದಿ, ಕುಟುಂಬ ಸದಸ್ಯರು ಹಾಗು ವಿದ್ಯಾರ್ಥಿಗಳು ವಿಜಯಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
ಇದಕ್ಕೂ ಪೂರ್ವದಲ್ಲಿ ಅಕ್ಟೋಬರ್ 2 ರಂದು ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನಾ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಶಸ್ತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ನೀಡಿ ಗೌರವಿಸಿದ್ದರು.