ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ
ಧಾರವಾಡ,ಅ.6: ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಡೆ ಅಧಿಕಾರಿಗಳು ಹೆಚ್ಚಾಗಿ ಗಮನಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೇಳಿದರು.
ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಅಳ್ಳಾವರ ಮತ್ತು ಕುಂದಗೋಳ ತಾಲೂಕಿನ ಕೆಲವು ಭಾಗಗಳಲ್ಲಿ ಸಾರಿಗೆ ಬಸ್‍ಗಳ ಹೆಚ್ಚಿನ ಬೇಡಿಕೆ ಇದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸಬೇಕು. ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಹಳ್ಳಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಹಣ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಬಹಳ?À್ಟು ದೂರುಗಳು ದಾಖಲಾಗುತ್ತಿವೆ. ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಬೇಕು. ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸುಳ್ಳು ಸುದ್ದಿಗಳು ಕೇಳಿ ಬರುತ್ತಿದ್ದು, ಅದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನು?Á್ಠನ ಪ್ರಾಧಿಕಾರದ ಅಧ್ಯಕ್ಷರು ಹೇಳಿದರು.
ಯುವನಿಧಿ ಯೋಜನೆಯ ಪ್ರಚಾರಕ್ಕೆ ಎಲ್ಲಾ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲು ಅವರು ಸೂಚಿಸಿದರು.
ಹಿಂದಿನ ಸಭೆಯಲ್ಲಿ ನ್ಯಾಯ ಬೆಲೆ ಅಂಗಡಿಯ ಮುಂದೆ ಬೋರ್ಡ ಅಳವಡಿಸಲು ಸೂಚಿಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ನ್ಯಾಯ ಬೆಲೆ ಅಂಗಡಿಗಳು ಬೋರ್ಡ ಅಳವಡಿಕೆಯನ್ನು ಮಾಡದೆ ಇರುವುದು ಗಮನಕ್ಕೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ಅಧಿಕಾರಿಗಳು ಗಮನಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನು?Á್ಠನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.