ಕೆರೆ ಅಭಿವೃದ್ಧಿ ಪಡಿಸಿ ಲೋಕಾರ್ಪಣೆ
ಕೆ.ಆರ್.ಪುರ, ಅ.೬- ಸಾರ್ವಜನಿಕರ ಅನುಕೂಲಕ್ಕೆ ಅನುಗುಣವಾಗಿ ಕೆರೆಗಳನ್ನು ಅಭಿವೃದ್ಧಿ ಪಡಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ತಿಳಿಸಿದರು.
ಮಹದೇವಪುರ ಕ್ಷೇತ್ರದ ದೊಡ್ಡಗುಬ್ಬಿ ಗ್ರಾಮ ಪಂಚಾಯತಿಯ ವತಿಯಿಂದ ರಾಂಪುರದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಉದ್ಘಾಟಿಸಿ ಮಾತನಾಡಿದರು.
ಮಹದೇವಪುರ ಕ್ಷೇತ್ರದ ಹಿಂದಿನ ಶಾಸಕರಾಗಿದ್ದ ಅರವಿಂದ ಲಿಂಬಾವಳಿ ಅವರ ಮಾರ್ಗದರ್ಶನದಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು,ಅವರ ಅನುಭವದ ಲಾಭ ಪಡೆದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕೈಗೆತ್ತಿಕೊಳ್ಳಲಾಗುವುದು ಎಂದು ನುಡಿದರು.ಪಲಾನುಭವಿಗಳಾದ ವಿಕಲ ಚೇತನರಿಗೆ ಗಾಲಿ ಕುರ್ಚಿ, ಕ್ರೀಡಾಪಟುಗಳಿಗೆ ಕ್ರಿಕೆಟ್ ಹಾಗೂ ವಾಲಿಬಾಲ್ ಸಾಮಗ್ರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಚೆಕ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಸಂತ ಕುಮಾರ್, ದೊಡ್ಡಗುಬ್ಬಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಪ್ಪ ,ಮಾಜಿ ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷೆ ಅಂಬಿಕಾ ಮಂಜುನಾಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿತ್,ಮುಖಂಡರಾದ ಮಹೆರಶ್, ಗಜೇಂದ್ರ,ಮೋಹನ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.