ರಾಜಕೀಯಕ್ಕಾಗಿ ಕೆಲಸ ಮಾಡಲ್ಲ ಈ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುವೆ:ಶಾಸಕ ಬಸವರಾಜು ವಿ ಶಿವಗಂಗಾ
ಸಂಜೆವಾಣಿ ವಾರ್ತೆ
ಚನ್ನಗಿರಿ.ಆ.೨೯ : ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆ ಮೂಲಭೂರ್ತ ಸೌಕರ್ಯ ಕಲ್ಪಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕರಾದ ಬಸವರಾಜು ವಿ ಶಿವಂಗಾ ತಿಳಿಸಿದರು. ತಾಲ್ಲೂಕಿನ ಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಾಗೂ ಕನ್ನಡ ಶಾಲೆಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದದರು. ಈ ವೇಳೆ ಮಾತನಾಡಿದ ಅವರು ಶಾಲೆಯ ಜಾಗ ವಿಚಾರ ಸಂಬಂಧ ಇದ್ದ ಸಮಸ್ಯೆಗೆ ಶೀಘ್ರದಲ್ಲೇ ಪರಿಹರಿಸುವುದಾಗಿ ಭರವಸೆ ನೀಡಿದರು. ಸರ್ಕಾರಿ ಶಾಲೆ ಜಾಗ ಬೇರೆಯವರ ಹೆಸರಲ್ಲಿದ್ದ ಹಿನ್ನೆಲೆ ಕಳೆದ 15 ವರ್ಷಗಳಿಂದ ಈ ಸಮಸ್ಯೆ ಉಂಟಾಗಿದೆ, ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು. ಶಾಲೆ ಅಭಿವೃದ್ಧಿ ದೃಷ್ಟಿಯಿಂದ ಜಾಗ ನೀಡಲು ಬಯಸಿದರೆ ಜಾಗ ಖರೀದಿಸಿ ಹೊಸ ಕಟ್ಟಡ ನಿರ್ಮಾಣ ಮಾಡುವುದರ ಜೊತೆ ಮಾದರಿ ಶಾಲೆಯನ್ನಾಗಿ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು . ನಾನು ರಾಜಕೀಯಕ್ಕಾಗಿ ಕೆಲಸ ಮಾಡಲ್ಲ ಈ ಕ್ಷೇತ್ರ ಮತ್ತು ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವೆ ಎಂದರು. ಹಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಎರಡು ನೂತನ ಕಟ್ಟಡ ನಿರ್ಮಾಣ ಮಾಡಲಾಗು ವುದು. ಮಕ್ಕಳಿಗೆ ಯಾವುದೇ ಸಮಸ್ಯೆಯಾಗದಂತೆ ಉತ್ತಮ ಶಿಕ್ಷಣ ಒದಗಿಸಲು ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಗುಣಮಟ್ಟದ ಶಿಕ್ಷಣ ಸಿಕ್ಕರೆ ಭವಿಷ್ಯದಲ್ಲಿ ಪ್ರತಿಭಾನ್ವಿತರಾಗುತ್ತಾರೆ, ಹೀಗಾಗಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವುದು ನಮ್ಮ ಕರ್ತವ್ಯ ಎಂದರು. ತಾಲ್ಲೂಕಿನಲ್ಲಿರುವ ಹಳೇ ಮತ್ತು ಹಾಳಾದ ಕಟ್ಟಡಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಹಂತ ಹಂತವಾಗಿ ಎಲ್ಲಾ ಶಾಲೆಗಳನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಶಾಸಕರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು. ಶಾಸಕರು ಶಾಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಇಲ್ಲಿನ ಮಕ್ಕಳು ಶಾಸಕರಿಗೆ ಪ್ರೀತಿ ತೊರುವ ಮೂಲಕ ಸಂಭ್ರಮ ವ್ಯಕ್ತಪಸಿದರು, ಈ ವೇಳೆ ಬಿಇಓ ಜಯ್ಯಪ್ಪ ಎಲ್, ಎಸ್‍ಡಿಎಂಸಿ ಸದಸ್ಯರು ಮತ್ತು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.