ಪ್ರವಾಸಿ ತಾಣಗಳ ಅಭಿವೃದ್ಧಿಗೆ ಡಿಪಿಆರ್
ಸಂಜೆವಾಣಿ ನ್ಯೂಸ್
ಮೈಸೂರು: ಆ.29:- ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗಾ ರೈಡ್ ಹಾಗೂ ಎಕೋಲಾಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಸ್ಥಳೀಯ ಪ್ರವಾಸೋದ್ಯಮ ಸರ್ಕ್ಯೂಟ್ ಮತ್ತು ಪ್ರವಾಸೋದ್ಯಮಕ್ಕೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿ ಡಾ.ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.