ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಗುರಿ ಸಾಧಿಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಆ. 28 : ಕೆಕೆಆರ್‍ಡಿಬಿ, ಶಾಸಕರ, ಸಂಸದರ, ಎಮ್‍ಎಲ್‍ಸಿ ನಿಧಿಯಡಿ ಮತ್ತು ಗಡಿನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಡಿ ಅನುಷ್ಠಾನದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಕಾರ್ಯನಿರ್ವಹಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.