ಕನಕ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
ವಿಜಯಪುರ,ಆ.28:ಕೃಷ್ಣ ಜನ್ಮಾಷ್ಟಮಿಯು ಭಾರತದಲ್ಲಿ ಆಚರಿಸುವ ಒಂದು ಶ್ರೇಷ್ಠ ಹಬ್ಬವಾಗಿದೆ. ವಿಷ್ಣು ಶ್ರೀಕೃಷ್ಣನಾಗಿ ಭೂಮಿ ಮೇಲೆ ಅವತರಿಸಿದ ಶುಭದಿನವನ್ನೇ ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸಲಾಗುತ್ತದೆ. ಭಾರತ ದೇಶವು ಸಂಸ್ಕøತಿ ಸಂಪ್ರದಾಯದ ತಾಣವಾಗಿದೆ. ಹಬ್ಬ-ಹರಿದಿನಗಳು ದೇಶದ ಪರಂಪರೆಯನ್ನ ತಿಳಿಸಿಕೊಡುತ್ತವೆ ಎಂದು ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಯಪ್ರಭು ಕೊಳಮಲಿ ಹೇಳಿದರು.
ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆಯಲ್ಲಿ ಆಚರಿಸಿದ ಕೃಷ್ಣ ಜನ್ಮಾಷ್ಟಮಿಯ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಲೆಯ ಮುದ್ದು ವಿದ್ಯಾರ್ಥಿಗಳು ರಾಧಾ-ಕೃಷ್ಣರ ವೇಷದಲ್ಲಿ ಮಿಂಚಿ ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ವಿಶಿಷ್ಟ ರೀತಿಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿ, ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.