ದೇವಲಗಾಣಗಾಪುರ: ರುಂಡ ಕತ್ತರಿಸಿ ವ್ಯಕ್ತಿಯ ಭೀಕರ ಹತ್ಯೆ
ಕಲಬುರಗಿ,ಅ.2-ವ್ಯಕ್ತಿಯೊಬ್ಬನ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರ ಗ್ರಾಮದ ಭೀಮಾ ನದಿಯ ತೀರದ ರುದ್ರಾಪಡ ಕಟ್ಟಿಯ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ದೇವಲಗಾಣಗಾಪುರ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯಕ್ತಿಯ ಬಲಗೈಯ ಮೇಲೆ ಶ್ರೀಶೈಲಂ ಎಂದು ಟ್ಯಾಟು ಇದೆ.
ಸೋಮವಾರ ರಾತ್ರಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.